Advertisement

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

[ad_1]

Amravati 2.0 In Kolhapur Man 22 Sexually Exploits Women In Maharashtra

ಮುಂಬೈ: ಇತ್ತೀಚೆಗೆ ಮಹಾರಾಷ್ಟ್ರದ (Maharashtra) ಅಮರಾವತಿಯಲ್ಲಿ ನಡೆದಿದ್ದ ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಮಾದರಿಯಲ್ಲೇ ಕೊಲ್ಹಾಪುರದಲ್ಲೂಂದು ಕೇಸ್‌ (Amravati 2.0) ಬೆಳಕಿಗೆ ಬಂದಿದೆ. ಅಮರಾವತಿ ಪ್ರಕರಣದಲ್ಲಿ ಆರೋಪಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಹಲವಾರು ಬಾಲಕಿಯರ ಮೇಲೆ ದೌರ್ಜನ್ಯ ಎಸಗಿ ಸುಮಾರು 180 ವಿಡಿಯೋ ಮಾಡಿಕೊಂಡಿದ್ದ. ಅದೇ ರೀತಿ ಕೊಲ್ಹಾಪುರ (Kolhapur) ಪ್ರಕರಣದಲ್ಲಿ 350 ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಫಾರ್ಮಸಿ ವಿದ್ಯಾರ್ಥಿಯಾಗಿರುವ ಆರೋಪಿ ಶಾಹಿದ್ ಸಮೀರ್ (22) ಹಲವು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೇ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿಕೊಂಡು, ಅವರನ್ನು ಬ್ಲ್ಯಾಕ್‌ಮೇಲ್‌ ಮಾಡಿ ಪದೇ ಪದೇ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. 20 ವರ್ಷದ ಯುವತಿಯೊಬ್ಬಳು ಏ.26 ರಂದು ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್‌ಮೇಲ್ ಬಗ್ಗೆ ದೂರು ದಾಖಲಿಸಿದ್ದರು. ದೂರಿನ ಅನ್ವಯ ಆತನ ಮೇಲೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನ್ಯಾಯಾಲಯವು ಆರೋಪಿಯನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಇದನ್ನೂ ಓದಿ: 180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ – ವಿಕೃತ ಕಾಮುಕನ ಮನೆಗೆ ಬುಲ್ಡೋಜರ್‌ ದಾಳಿ

ಆರೋಪಿ ಸಾಮಾಜಿಕ ಮಾಧ್ಯಮಗಳ ಮೂಲಕ ಯುವತಿಯರೊಂದಿಗೆ ಸ್ನೇಹ ಬೆಳೆಸಿ, ಕೊಲ್ಹಾಪುರ ಮತ್ತು ಶಿರೋಲಿಯ ಲಾಡ್ಜ್‌ಗಳಿಗೆ ಕರೆದೊಯ್ಯುತ್ತಿದ್ದ. ಅಲ್ಲಿ ಲೈಂಗಿಕ ದೌರ್ಜನ್ಯ ಎಸಗಿ, ರಹಸ್ಯವಾಗಿ ವಿಡಿಯೋಗಳನ್ನು ರೆಕಾರ್ಡ್ ಮಾಡುತ್ತಿದ್ದ. ಈ ವಿಡಿಯೋಗಳನ್ನು ತನ್ನ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದ ಎನ್ನಲಾಗಿದೆ. ಅಲ್ಲದೇ ಯಾರಿಗಾದರೂ ಈ ಬಗ್ಗೆ ಮಾಹಿತಿ ನೀಡಿದರೆ ವಿಡಿಯೋ ವೈರಲ್‌ ಮಾಡುವ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

18 ರಿಂದ 22 ವರ್ಷ ವಯಸ್ಸಿನ ಸುಮಾರು 10 ಯುವತಿಯರನ್ನು ಇದೇ ರೀತಿ ಗುರಿಯಾಗಿಸಿಕೊಂಡಿದ್ದಾನೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಇನ್ನೂ ಸಂತ್ರಸ್ತೆಯರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವ ಪ್ರತಿಷ್ಠಾನ್ ಹಿಂದೂಸ್ತಾನ್ ಮತ್ತು ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಮನವಿ ಪತ್ರವನ್ನು ಸಲ್ಲಿಸಿ, ಸೂಕ್ತ ತನಿಖೆ ಮತ್ತು ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ತರಿಗೆ ಮನವಿ
ಸಂತ್ರಸ್ತೆಯರು ಮುಂದೆ ಬಂದು ದೂರು ದಾಖಲಿಸುವಂತೆ ಪೊಲೀಸರು ಸೂಚಿಸಿದ್ದಾರೆ. ದೂರು ನೀಡಿದವರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್

[ad_2]

Source link publictv.in

Leave a Reply

Your email address will not be published. Required fields are marked *