Advertisement

ಕೊಳೆತ ಸ್ಥಿತಿಯಲ್ಲಿ ಯುವತಿಯ ಬೆತ್ತಲೆ ಶವ ಪತ್ತೆ

[ad_1]

ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ಬಾಡಿಗೆ ಮನೆಯಲ್ಲಿಯೇ ಕೊಳೆತ ಸ್ಥಿತಿಯಲ್ಲಿ ನಗ್ನ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ಪೂಜಾ ದತ್ತಾ ಮೃತ ಯುವತಿ. ಆಕೆ ಜಾರ್ಖಂಡ್ ಮೂಲದವಳು. ಪೂಜಾ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಇತ್ತೀಚಿಗೆ ಕೆಲಸ ಕಳೆದುಕೊಂಡಿದ್ದಳು. ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಮನೆ ಪರಿಶೀಲನೆ ವೇಳೆ ಖಾಸಗಿ ಕಂಪನಿಯ ಐ.ಡಿ ಕಾರ್ಡ್ ಪತ್ತೆಯಾಗಿದೆ. ರೂಂನಲ್ಲಿ ಬೆತ್ತಲೆಯಾಗಿ ಪೂಜಾ ಮೃತದೇಹ ಬಿದ್ದಿದೆ. ರೂಂ ತುಂಬಾ ಕೆಲ ಪೇಪರ್‌ಗಳು ಹರಿದಾಕಿರೋದು ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ದುರ್ವಾಸನೆಯಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

ಮೃತ ಪೂಜಾ ವಾಸವಿದ್ದ ಮನೆಯ ಮಾಲೀಕ ಜಾನಕಮ್ಮ ಹೇಳುವ ಪ್ರಕಾರ, ಪೂಜಾ ದತ್ತಾ ಕಳೆದ ಮೂರು ವರ್ಷಗಳಿಂದ ನನ್ನ ಮನೆಯಲ್ಲಿ ಬಾಡಿಗೆಗೆ ಇದ್ದಳು. ಆಕೆ ಅವಿವಾಹಿತೆ. ಹೆಚ್ಚಾಗಿ ಹಿಂದಿಯಲ್ಲೇ ಸಂವಹನ ನಡೆಸುತ್ತಿದ್ದಳು. ಆಕೆಯನ್ನು ಭೇಟಿ ಮಾಡಲು ಒಬ್ಬ ಯುವಕ ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಅವನೊಂದಿಗೆ ಪೂಜಾ ಸದಾ ಜಗಳವಾಡುತ್ತಿದ್ದಳು. ಆದರೆ ಆ ಜಗಳಕ್ಕೆ ಕಾರಣವೇನು ಎಂಬುದು ಮಾತ್ರ ತಿಳಿಯುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.



[ad_2]

Source link

Leave a Reply

Your email address will not be published. Required fields are marked *