Advertisement

ಯೋಗೀಶ್‌ಗೌಡ ಕೊಲೆ ಪ್ರಕರಣ- ವಿನಯ ಕುಲಕರ್ಣಿ ಶಾಸಕತ್ವ ರದ್ದಾಯ್ತು ಎಂದ ಸ್ವೀಕರ್ ಖಾದರ್

[ad_1]

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ಶಾಕ್ ನೀಡಿದ್ದು ಒಳಸಂಚು ಆರೋಪದ ಹಿನ್ನೆಲೆ ವಿನಯ್ ಕುಲಕರ್ಣಿ ಅಪರಾಧಿ ಎಂದು ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ. ಈ ಬೆನ್ನಲ್ಲೇ ಇದೀಗ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ವಿನಯ್ ಕುಲಕರ್ಣಿ ಶಾಸಕ ಸ್ಥಾನವನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಒಬ್ಬ ಜನಪ್ರತಿನಿಧಿಯು ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾದ ತಕ್ಷಣ, ನಿಯಮಗಳ ಪ್ರಕಾರ ಅವರ ಶಾಸಕ ಸ್ಥಾನ ತಾನಾಗಿಯೇ ರದ್ದಾಗುತ್ತದೆ. ಇದನ್ನು ರದ್ದು ಮಾಡುವ ವಿಶೇಷ ಅಧಿಕಾರ ಸಭಾಧ್ಯಕ್ಷರಿಗಿಲ್ಲ. ಒಂದು ವೇಳೆ ನ್ಯಾಯಾಲಯವು ಈ ಶಿಕ್ಷೆಗೆ ತಡೆಯಾಜ್ಞೆ ನೀಡಿದರೆ ಮಾತ್ರ ಅವರ ಸದಸ್ಯತ್ವ ಮರುಸ್ಥಾಪನೆಯಾಗುತ್ತದೆ,” ಎಂದು ವಿವರಿಸಿದರು.



[ad_2]

Source link

Leave a Reply

Your email address will not be published. Required fields are marked *