Advertisement

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

[ad_1]

Siddaramaiah 1 7

-ಗೋಡೆಗೆ ಹಾನಿಯಾಗುತ್ತೆ ಅಂತ ಗೊತ್ತಿದ್ರೂ ಮಣ್ಣು ಸುರಿದಿದ್ದು ಯಾಕೆ? ತರಾಟೆಗೆ ತೆಗೆದುಕೊಂಡ ಸಿಎಂ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು ಮಾಡಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆದೇಶ ಹೊರಡಿಸಿದ್ದಾರೆ.

ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಜನರು ಸಾವು ಹಾಗೂ ಮಳೆ ಅವಾಂತ ಸಂಬಂಧ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಿಎಂ ಸಭೆ ನಡೆಸಿದ್ದರು. ಈ ವೇಳೆ ಸಿಎಂ ಕೆಲ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗೋಡೆಗೆ ಹಾನಿ ಆಗಲಿದೆ ಅಂತ ಗೊತ್ತಿದ್ದರೂ ಕೂಡ ಕಾಮಗಾರಿ ಮಣ್ಣನ್ನು ಅಲ್ಲಿ ಸುರಿದಿದ್ದು ಯಾಕೆ ಎಂದು ಪ್ರಶ್ನಿಸಿ, ಸಂಬಂಧಪಟ್ಟ ಕಾರ್ಯಪಾಲಕ ಎಂಜಿನಿಯರ್ ಅನ್ನು ಅಮಾನತು ಮಾಡುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಇದೇ ವೇಳೆ ಮಣ್ಣು ಸುರಿದಿದ್ದರೂ ಕೂಡ ನೀವು ಯಾಕೆ ನೋಡಿಕೊಳ್ಳಲಿಲ್ಲ ಎಂದು ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಈ ಸಂಬಂಧ ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಸಿಎಂ ಆದೇಶಿಸಿದ್ದಾರೆ.

ನಿನ್ನೆ (ಏ.29) ಸುರಿದ ಮಳೆಯಿಂದ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಏನೇನು ಆಗಿದೆ? ಯಾವೆಲ್ಲ ಪರಿಹಾರ ಕಾರ್ಯಗಳು ನಡೆದಿವೆ? ತೆರವು ಕಾರ್ಯಚರಣೆ ಎಷ್ಟು ಆಗಿದೆ? ಎಂಬುದರ ಮಾಹಿತಿ ಸಂಗ್ರಹ ಮಾಡಿದ್ದಾರೆ. ಇನ್ನೂ ಏನೇನು ಪರಿಹಾರ ಕಾರ್ಯಗಳು ಕೈಗೊಳ್ಳಬೇಕು ಎಂಬ ವಿಚಾರ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಜಿಬಿಎ ಅಧಿಕಾರಿಗಳು ಭಾಗಿಯಾಗಿದ್ದರು.

ನಿನ್ನೆ (ಏ.29) ಸಂಜೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಬಳಿಕ ಬೌರಿಂಗ್‌ ಆಸ್ಪತ್ರೆಗೆ ತೆರಳಿ ಗಾಯಾಳುಗಳು ಆರೋಗ್ಯ ವಿಚಾರಿಸಿದ ಸಿಎಂ ಉಚಿತ ಚಿಕಿತ್ಸೆ ನೀಡುವಂತೆ ತಿಳಿಸಿದ್ದರು.

ಬಳಿಕ ಮಾಧ್ಯಗಳೊಂದಿಗೆ ಮಾತನಾಡಿದ ಸಿಎಂ, ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 7 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರು ಸ್ಟೇಬಲ್‌ ಆಗಿ ಇದ್ದಾರೆ, ಎಲ್ಲರಿಗೂ ಉಚಿತ ಚಿಕಿತ್ಸೆ ಕೊಡಲು ಹೇಳಿದ್ದೇನೆ ಎಂದರಲ್ಲದೇ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಕೊಡುವುದಾಗಿ ಘೋಷಿಸಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಸುರಿದ ಭೀಕರ ಮಳೆಗೆ 7 ಬಲಿ – ಗೋಡೆ ಕುಸಿತಕ್ಕೆ ಕಾರಣ ಏನು?


[ad_2]

Source link publictv.in

Leave a Reply

Your email address will not be published. Required fields are marked *