Advertisement

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

[ad_1]

Dharmendra Pradhan

ಬೆಂಗಳೂರು: ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚನೆ ಆಗುವುದು ಖಚಿತ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು (ಏ.30) ಬೆಂಗಳೂರಿಗೆ ಬಂದಿದ್ದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೇಲೆ ಜನತೆ ವಿಶ್ವಾಸ ಇಟ್ಟಿದ್ದಾರೆ. ಅಸ್ಸಾಂನಲ್ಲಿ ಜನತೆ ಮೂರನೇ ಬಾರಿ ಸೇವೆ ಮಾಡುವ ಅವಕಾಶ ನೀಡಲಿದ್ದಾರೆ. ಬಂಗಾಳದಲ್ಲಿ ಈ ಬಾರಿ ರಾಷ್ಟ್ರವಾದಿಗಳ ಸರ್ಕಾರ ರಚನೆ ಆಗಲಿದೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

ಪಾಂಡಿಚೇರಿಯಲ್ಲಿ ಎನ್‌ಡಿಎ ಸರ್ಕಾರ ಬರಲಿದೆ. ತಮಿಳುನಾಡಿನಲ್ಲಿ ಒಳ್ಳೆಯದೇ ಆಗಲಿದೆ. ಕೇರಳದಲ್ಲಿ ಬಿಜೆಪಿ ಪ್ರಮುಖ ಶಕ್ತಿಯಾಗಿ ಹೊರಹೊಮ್ಮುತ್ತದೆ ಎಂದು ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ (ಏ.29) ಸಂಜೆ ಸುರಿದ ಭಾರಿ ಮಳೆಯಿಂದ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಬಿದ್ದ ಪರಿಣಾಮ ಹಲವರು ದುರ್ಮರಣಕ್ಕೀಡಾದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುವುದಾಗಿ ತಿಳಿಸಿದ್ದಾರೆ.ಇದನ್ನೂ ಓದಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಕೇಸ್ – 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್


[ad_2]

Source link publictv.in

Leave a Reply

Your email address will not be published. Required fields are marked *