Advertisement

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

[ad_1]

Heavy rains in Bengaluru Bowring Hospital wall collapses 6 dead

– ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ಗಳನ್ನ ಅಮಾನತುಗೊಳಿಸಲಾಗಿದೆ.

ಸಹಾಯಕ ಕಾರ್ಯನಿರ್ವಹಕ ಅಭಿಯಂತರ ಆರ್‌.ಟಿ ರುದ್ರಮುನಿ, ಕಾರ್ಯನಿರ್ವಹಕ ಅಭಿಯಂತರ ಮೊಹಮದ್ ಜಾವೇದ್ ಇಬ್ಬರನ್ನು ಅಮಾನತುಗೊಳಿಸಿ ಜಿಬಿಎ ಉಪ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

DK Shivakumar Bowring Hospital Visit

ಡಿಸಿ ನೇತೃತ್ವದಲ್ಲಿ ತನಿಖೆಗೆ ಆದೇಶ
ಇನ್ನೂ ಪ್ರಕರಣವನ್ನ ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದ್ದು, 7 ದಿನದೊಳಗಾಗಿ ತನಿಖಾ ವರದಿ ನೀಡುವಂತೆ ಆದೇಶ ಮಾಡಿದೆ. ತನಿಖಾ ಸಮಿತಿಯು ತಹಶೀಲ್ದಾರ್, PWD ನಿವೃತ್ತ ಮುಖ್ಯ ಇಂಜಿನಿಯರ್ ಸೇರಿದಂತೆ 6 ಜನರನ್ನು ಒಳಗೊಂಡಿದೆ. ಇದನ್ನೂ ಓದಿ: ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

ಇನ್ನೂ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಅಮಾಯಕರು ಬಲಿಯಾದ ಪ್ರಕರಣವನ್ನು ಕರ್ನಾಟಕ ಲೋಕಾಯುಕ್ತ ಗಂಭೀರವಾಗಿ ಪರಿಗಣಿಸಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್, ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧ ಕೆಂಡಾಮಂಡಲರಾದ್ರು.

ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಿದ್ದಾರೆ. ಇನ್ನೊಂದೆಡೆ, ಕೆ.ಆರ್. ಸರ್ಕಲ್‌ನ ಅಂಡರ್‌ಪಾಸ್‌ಗೂ ಲೋಕಾಯುಕ್ತರು ಭೇಟಿ ಕೊಟ್ಟು ಪರಿಶೀಲಿಸಿದ್ದಾರೆ. ಕಾಂಪೌಂಡ್‌ನ ಅಡಿಪಾಯ ಅತ್ಯಂತ ದುರ್ಬಲವಾಗಿದ್ದೇ ಈ ದುರಂತಕ್ಕೆ ಪ್ರಮುಖ ಕಾರಣ. ನಗರದಲ್ಲಿ ಪ್ರತಿ ವರ್ಷ ಮಳೆ ಬರುತ್ತದೆ ಎಂಬುದು ಗೊತ್ತಿದ್ದರೂ, ಇಂತಹ ದುರ್ಬಲ ಗೋಡೆಗಳ ಪಕ್ಕದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಅವಕಾಶ ನೀಡಿರುವುದು ಅಧಿಕಾರಿಗಳ ಬೇಜವಾಬ್ದಾರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಜಿಬಿಎ ಮುಖ್ಯ ಆಯುಕ್ತ ಸೇರಿ ಪ್ರಮುಖ ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಮಾಡೋದಾಗಿ ಹೇಳಿದ್ದಾರೆ.

[ad_2]

Source link publictv.in

Leave a Reply

Your email address will not be published. Required fields are marked *