[ad_1]
3
ಮೇ ತಿಂಗಳ ಆರಂಭದಲ್ಲೇ ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಹಾಗೂ ಸಣ್ಣ ವ್ಯವಹಾರ ನಡೆಯುವವರಿಗೆ ಕೇಂದ್ರ ಸರ್ಕಾರವು ದೊಡ್ಡ ಶಾಕ್ ನೀಡಿದ್ದು, ವಾಣಿಜ್ಯ ಸಿಲಿಂಡರ್ ದರದಲ್ಲಿ ಬರೋಬ್ಬರಿ 993 ರೂಪಾಯಿ ಏರಿಕೆ ಮಾಡಿದೆ.


ಮೇ 1 ರಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 993 ರೂ. ಏರಿಕೆಯಾಗಿದೆ. ದೆಹಲಿಯಲ್ಲಿ ಇದರ ಬೆಲೆ ಈಗ 3,071.50 ರೂ. ತಲುಪಿದೆ. ಈ ಏರಿಕೆಯು ಹೋಟೆಲ್, ರೆಸ್ಟೋರೆಂಟ್‌ಗಳಂತಹ ವಾಣಿಜ್ಯ ಸಂಸ್ಥೆಗಳ ಮೇಲೆ ನೇರ ಪರಿಣಾಮ ಬೀರಲಿದೆ.
ಇಂಧನ ಕಂಪನಿಗಳ ಪ್ರಕಾರ, ಇತ್ತೀಚಿನ ಜಾಗತಿಕ ತೈಲ ಮತ್ತು ಅನಿಲ ಮಾರುಕಟ್ಟೆಯ ಅಸ್ಥಿರತೆ, ಸರಬರಾಜು ಸರಪಳಿಯ ವೆಚ್ಚ ಏರಿಕೆ ಹಾಗೂ ವಿನಿಮಯ ದರದ ಪರಿಣಾಮದಿಂದ ಈ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಬೆಲೆ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್‌ಗಳು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ನೇರ ಆರ್ಥಿಕ ಪರಿಣಾಮ ಬೀರಲಿದ್ದು, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.
ಆದರೆ ಗೃಹ ಬಳಕೆಯ 14.2 ಕೆ.ಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಕೊನೆಯದಾಗಿ ಮಾರ್ಚ್ 7ರಂದು ₹60 ಹೆಚ್ಚಿಸಲಾಗಿತ್ತು. ದೆಹಲಿಯಲ್ಲಿ ಇದರ ಬೆಲೆ ₹913ಆಗಿದೆ
[ad_2]
Source link


















Leave a Reply