Advertisement

ಪಶ್ಚಿಮ ಬಂಗಾಳದ 2 ಕ್ಷೇತ್ರಗಳ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ

[ad_1]

West Bengal Election Voting Vote

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್ ಮತ್ತು ಮಗ್ರಹತ್ ಪಶ್ಚಿಮ್ ಕ್ಷೇತ್ರಗಳಲ್ಲಿ ಅಕ್ರಮ ನಡೆದಿದೆ ಎಂದು ದೂರುಗಳು ಬಂದ ಹಿನ್ನೆಲೆ 15 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವುದಾಗಿ ಭಾರತೀಯ ಚುನಾವಣಾ ಆಯೋಗ ಘೋಷಿಸಿದೆ.

ಮಗ್ರಹತ್ ಪಶ್ಚಿಮ್‌ನ 11 ಮತಗಟ್ಟೆಗಳಲ್ಲಿ ಮತ್ತು ಡೈಮಂಡ್ ಹಾರ್ಬರ್‌ನ 4 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತನ್ನ ಆದೇಶದಲ್ಲಿ ತಿಳಿಸಿದೆ. ಎಲ್ಲಾ 15 ಮತಗಟ್ಟೆಗಳಲ್ಲಿ ಮತದಾನ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗಿ ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು ಏಪ್ರಿಲ್ 29 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ಸ್ವಾತಂತ್ರ್ಯದ ನಂತರ ರಾಜ್ಯವು ಅತಿ ಹೆಚ್ಚು ಮತದಾನವನ್ನು ದಾಖಲಿಸಿದೆ. ಎರಡೂ ಹಂತಗಳ ಒಟ್ಟಾರೆ ಮತದಾನ ಶೇ. 92.47 ರಷ್ಟಿತ್ತು ಎಂದು ಚುನಾವಣಾ ಆಯೋಗ ಕಳೆದ ವಾರ ತಿಳಿಸಿತ್ತು. ಮೇ 4 ರಂದು ಮತ ಎಣಿಕೆ ನಡೆಯಲಿದೆ.

ಮತದಾನದ ನಂತರದ ಹಿಂಸಾಚಾರವನ್ನು ತಡೆಗಟ್ಟಲು ಚುನಾವಣಾ ಆಯೋಗವು ಕಟ್ಟೆಚ್ಚರ ವಹಿಸಿದೆ. ಪಕ್ಷದ ಅಧಿಕೃತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಮತಪೆಟ್ಟಿಗೆಗಳನ್ನು ತೆರೆಯಲಾಗಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ನಾಯಕರು ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರತಿಭಟನೆ ನಡೆಸಿದ್ದರು. ಕೋಲ್ಕತ್ತಾ ಪೊಲೀಸರು ಮತ ಎಣಿಕೆ ನಡೆಯುವ ಏಳು ಪ್ರದೇಶಗಳಲ್ಲಿ ಸಭೆ ಸೇರುವುದನ್ನು ನಿಷೇಧಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಅವರು ತೃಣಮೂಲ ಕಾಂಗ್ರೆಸ್ ಆರೋಪಗಳನ್ನು ತಳ್ಳಿಹಾಕಿದ್ದಾರೆ.

[ad_2]

Source link publictv.in

Leave a Reply

Your email address will not be published. Required fields are marked *