Advertisement

ಬಾಡಿಗೆ ಮನೆಯಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

[ad_1]

ಕಡಬ: ನೂಜಿಬಾಳ್ತಿಲ ಗ್ರಾಮದ ಬಾಡಿಗೆ ಕೊಠಡಿಯೊಂದರಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯ ಪುತ್ರ, ಕಡಬ ಕೊಣಾಜೆ ನಿವಾಸಿ ರವಿಚಂದ್ರ ಬಿ (37) ಎಂಬುವವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.

ಮೃತರು ನೂಜಿಬಾಳ್ತಿಲದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದು, ಮದ್ಯಪಾನ ಮಾಡುವ ಅಭ್ಯಾಸವನ್ನು ಹೊಂದಿದ್ದರು ಎನ್ನಲಾಗಿದೆ.

ಮೇ, 1,2026 ರಂದು ಕಟ್ಟಡದ ಮಾಲೀಕರು ರವಿಚಂದ್ರ ಎನ್ನುವವರಿಗೆ ಕರೆ ಮಾಡಿ, ತಂದೆಯವರು ವಾಸವಿದ್ದ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯವನ್ನು ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪುತ್ರ ರವಿಚಂದ್ರ ಅವರು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

banner

ಈ ಕುರಿತು ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.



[ad_2]

Source link

Leave a Reply

Your email address will not be published. Required fields are marked *