Advertisement

ದಾವಣಗೆರೆ: ದೇವಸ್ಥಾನ ಬಳಿ ನಿಧಿ ಶೋಧ; ಆರು ಜನ ಬಂಧನ » Dvgsuddi Kannada | online news portal

[ad_1]

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಕಾಡಜ್ಜಿ ಗ್ರಾಮದ ದೇವಸ್ಥಾನ ಬಳಿ ನಿಧಿ ಶೋಧಿಸಲು ಯತ್ನಿಸಿದ ಆರೋಪದ ಮೇರೆಗೆ ಆರು ಜನರನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕಾಡಜ್ಜಿ ಗ್ರಾಮದ ಬಸವರಾಜ (42), ಮಲೇಬೆನ್ನೂರಿನ ಪ್ರಕಾಶ ಆಚಾರಿ (48), ಮಂಜುನಾಥ (51), ಪ್ರಕಾಶ (42), ಹೊನ್ನಾವರ ತಾಲ್ಲೂಕಿನ ಇಡಗುಂಜಿ ಗ್ರಾಮದ ರಾಮನಾಥ ಪೈ (52), ಸಾಗರ ತಾಲ್ಲೂಕಿನ ಬ್ಯಾಕೋಡು ಗ್ರಾಮದ ಶ್ರೀಕಾಂತ ಭಟ್ (51) ಬಂಧಿತರು.

ಆರೋಪಿಗಳು ಏ. 22ರಂದು ರಾತ್ರಿ ಕಾಡಜ್ಜಿ ಗ್ರಾಮದ ಚೌಡಮ್ಮ ದೇಗುಲದಲ್ಲಿ ನಿಧಿ ಶೋಧ ಮಾಡಿದ್ದರು. ಏ.29ರಂದು ರಾತ್ರಿ ಪೇಟೆ ದುರುಗಮ್ಮ ದೇಗುಲದ ಬಳಿ ಜೆಸಿಬಿ ಮೂಲಕ ಗುಂಡಿ ತೆಗೆದಿದ್ದರು. ದುಷ್ಟ ಶಕ್ತಿ ಪೂಜೆ, ಹೋಮ- ಹವನ ಮಾಡಿ ಗರ್ಭಗುಡಿಯಲ್ಲಿ ನಿಧಿ ತೆಗೆಯಲು ಮುಂದಾಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಆರೋಪಿಗಳನ್ನು ಹಿಡಿಯಲು ಯತ್ನಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆಯ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ.

 

[ad_2]

Source link

Leave a Reply

Your email address will not be published. Required fields are marked *