[ad_1]
2
ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ಲೈಂಗಿಕ ಕ್ರಿಯೆಗೆ ನಿರಾಕರಣೆ ಮಾಡಿದಳು ಎನ್ನುವ ಕಾರಣಕ್ಕೆ ಮಹಿಳೆಯ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿರುವ ಘಟನೆ ನಡೆದಿದೆ.


ಚಂದ್ರ (41) ಕೊಲೆ ಆರೋಪಿಯಾಗಿದ್ದಾನೆ. 35 ವರ್ಷದ ಮಹಿಳೆ ಲೈಂಗಿಕ ಕ್ರಿಯೆಗೆ ಒಪ್ಪದಿದ್ದಾಗ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಮಹಿಳೆಯ ಪತಿ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದು, ಈಕೆ ಅದೇ ಗ್ರಾಮದ ಚಂದ್ರ ಎನ್ನುವವನ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಳು. ಎಪ್ರಿಲ್ 28 ರಂದು ಮಹಿಳೆ ಮನೆಗೆ ಬಂದಿದ್ದ ಚಂದ್ರ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿದ್ದಾನೆ. ಇದಕ್ಕೆ ಮಹಿಳೆ ನಿರಾಕರಿಸಿದ್ದಾಳೆ. ಆಗ ಆತ ಆಕೆಯ ಮೇಲೆ ಹಲ್ಲೆ ಮಾಡಿ ಮರ್ಮಾಂಗಕ್ಕೆ ಒದ್ದಿದ್ದಾನೆ.
ಎಪ್ರಿಲ್ 30 ರಂದು ಮಹಿಳೆ ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾಳೆ. ಯಸಳೂರು ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
[ad_2]
Source link

















Leave a Reply