[ad_1]
ಬೆಳ್ತಂಗಡಿ: ಬೆಳ್ತಂಗಡಿ ಇಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿಯೇ ಸಂತೆ ನಡೆಯುತ್ತಿರುವ ಕಾರಣ ಸೋಮವಾರ ಹೆಚ್ಚಿನ ಟ್ರಾಫಿಕ್ ಜಾಮ್ ಆಗುತ್ತಿದೆ. ಆದರೂ ಸಂತೆಯನ್ನು ಬೇರೆಡೆಗೆ ಸ್ಥಳಾಂತರಿಸುವ ಯಾವುದೇ ಕೆಲಸ ನಡೆಯುತ್ತಿಲ್ಲ.
ಬೆಳ್ತಂಗಡಿ ಸಂತೆಗೆ ಹಲವು ದಶಕಗಳ ಇತಿಹಾಸವಿದೆ. ಈ ಹಿಂದೆ ವಾಹನಗಳ ಸಂಖ್ಯೆ ಕಡಿಮೆಯಾಗಿದ್ದ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಈಗ ವಾಹನಗಳ ಸಂಖ್ಯೆ ಹೆಚ್ಚಿರುವ ಕಾರಣ ವಾರದ ಸಂತೆ ಜನತೆಗೆ ಖುಷಿ ಕೊಡುವ ಬದಲಾಗಿ ಸಂಕಷ್ಟಕ್ಕೆ ಎಡೆಮಾಡಿಕೊಟ್ಟಿದೆ.
ಬಿ.ಸಿ ರೋಡ್- ಕಡೂರು ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ಬೆಳ್ತಂಗಡಿಯ ವಾರದ ಸಂತೆ ಸಂತೆಕಟ್ಟೆ ಪ್ರದೇಶದಲ್ಲಿ ನಡೆಯುತ್ತದೆ. ಸೋಮವಾರ ಒಂದು ದಿನಕ್ಕೆ ಸೀಮಿತವಾಗಿರುವ ಈ ಸಂತೆಯಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ರೈತರು ಸೇರಿದಂತೆ ವಿವಿಧ ಜಿಲ್ಲೆಯ ರೈತರು ತರಕಾರಿ, ಸೇರಿದಂತೆ ನಿತ್ಯೋಪಯೋಗಿ ವಸ್ತುಗಳು, ಹಣ್ಣುಹಂಪಲುಗಳನ್ನು ರಸ್ತೆ ಬದಿಯಲ್ಲೇ ಮಾರಾಟ ಮಾಡುತ್ತಾರೆ. ಸಂತೆ ಏಲಂ ಪಡೆದುಕೊಂಡವರು ಪರ್ಯಾಯ ವ್ಯವಸ್ಥೆ ಮಾಡದೇ ಪ್ರತಿ ವಾರ ರೈತರಿಂದ ವಸೂಲಿಗೆ ಮಾತ್ರ ಬರುತ್ತಾರೆ ಎಂಬ ಆರೋಪವಿದೆ.
ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಸಂತೆ ಪ್ರಾಂಗಣವಿದೆ. ಇದು ನಿತ್ಯ ಅಂಗಡಿ ನಡೆಸುವವರು ಏಲಂ ಮೂಲಕ ಪಡೆದುಕೊಂಡು ಅಂಗಡಿ ನಡೆಸುತ್ತಿದ್ದಾರೆ. ಅದು ಬಿಟ್ಟರೆ ವಾರದ ಸಂತೆಯ ದಿನ ನಾಲೈದು ಅಂಗಡಿಗಳಿಗೆ ಮಾತ್ರ ಸ್ಥಳಾವಕಾಶ ಇದೆ. ಇದರಿಂದಾಗಿ ಅನಿವಾರ್ಯವಾಗಿ ವಾರದ ಸಂತೆ ರಾಷ್ಟ್ರೀಯ ಹೆದ್ದಾರಿಯಲ್ಲೇ ನಡೆಯುವಂತಾಗಿದೆ.
ಪುಂಜಾಲಕಟ್ಟೆಯಿಂದ ಚಾರ್ಮಾಡಿ ತಕನದ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿಯು ಭರದಿಂದ ನಡೆಯುತ್ತಿದ್ದು, ಪ್ರಸ್ತುತ ಬೆಳ್ತಂಗಡಿ ಸಂತೆಕಟ್ಟೆ ಪ್ರದೇಶದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದೇ ಸಮಯದಲ್ಲಿ ವಾರದ ಸಂತೆಯೂ ರಾಷ್ಟ್ರೀಯ ಹೆದ್ದಾರಿಯಲ್ಲೇ ನಡೆಯುತ್ತಿರುವುದು ಇತ್ತ ಟ್ರಾಫಿಕ್ ಜಾಮ್ ಜೊತೆಗೆ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದೆ.
The post ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ appeared first on Hosakananda.
[ad_2]
Source link

















Leave a Reply