Advertisement

ಕರಾವಳಿಯಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

[ad_1]

ಮಂಗಳೂರು/ಉಡುಪಿ: ಕರಾವಳಿಯಲ್ಲಿ ಬುಧವಾರದಿಂದ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಮಂಗಳವಾರ ಲಘು ಮಳೆಯಾಗಬಹುದು. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಸಾಧಾರಣ ಮತ್ತು ದಕ್ಷಿಣ ಒಳನಾಡಿನಾದ್ಯಂತ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆ ಹೊಂದಲಾಗಿದೆ.

ಗಾಳಿ ಮತ್ತು ಸಿಡಿಲಿನ ಅಬ್ಬರ ಕೂಡಾ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೋಮವಾರ ಉರಿ ಬಿಸಲು ಮತ್ತು ಸೆಕೆಯಿಂದ ಕೂಡಿದ ವಾತಾವರಣ ಇತ್ತು. ಬೆಳಗ್ಗೆ ಕರಾವಳಿಯ ಹೆಚ್ಚಿನ ಕಡೆ ಮೋಡದ ವಾತಾವರಣ ಇತ್ತಾದರೂ ಎಲ್ಲಿಯೂ ಮಳೆ ಸುರಿದಿಲ್ಲ. ಮೈಸೂರು ಮತ್ತು ಚಾಮರಾಜನಗರದ ಕೆಲವು ಕಡೆ ಲಘು ಮಳೆಯಾಗಿರುವ ಕುರಿತಂತೆ ವರದಿಯಾಗಿದೆ.

banner

ಮಂಗಳೂರಿನಲ್ಲಿ 34 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.3 ಡಿ.ಸೆ. ಇಳಿಕೆ ಮತ್ತು 26.1 ಡಿ.ಸೆ ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.8 ಡಿ.ಸೆ ಉಷ್ಣಾಂತ ಹೆಚ್ಚಿತ್ತು.



[ad_2]

Source link

Leave a Reply

Your email address will not be published. Required fields are marked *