[ad_1]
2
ಬೆಂಗಳೂರು; ಮಹಿಳೆಯರ ಜೊತೆಗಿನ ವೈರಲ್ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್ ಅಧಿಕಾರಿ ಡಾ.ಕೆ.ರಾಮಚಂದ್ರರಾವ್ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರಕಾರ ರದ್ದು ಪಡಿಸಿದ್ದು, ಕೂಡಲೇ ಜಾರಿಗೆ ಬರುವಂತೆ ಮರು ನೇಮಕ ಮಾಡಲಾಗಿದೆ. ಅಲ್ಲದೇ ಅವರಿಗೆಂದೇ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಎನ್ನುವ ಹುದ್ದೆ ಸೃಷ್ಟಿಸಲಾಗಿದೆ. ಆಲ್ ಇಂಡಿಯಾ ಸರ್ವಿಸ್ ನಿಯಮಗಳ ಅಡಿ ಈಗ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.


ಮಹಿಳೆಯರ ಜೊತೆಗಿನ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿತ್ತು. ಅವು ಡೀಪ್‌ಫೇಕ್ ಮತ್ತು ಎಐ ನಿರ್ಮಿತ ಅಲ್ಲ ಎಂದು ಸ್ಪಷ್ಟಪಡಿಸಲಾಗಿತ್ತು. ಆದರೂ ಕೂಡಾ ಅಮಾನತು ಹಿಂಪಡೆದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಸರಕಾರ ಈ ನಡೆ ಚರ್ಚೆಗೆ ಗ್ರಾಸವಾಗಿದೆ.
[ad_2]
Source link

















Leave a Reply