[ad_1]
1
ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ 2026 ಪ್ಲೇಆಫ್ ಹಾಗೂ ಫೈನಲ್ ಪಂದ್ಯಗಳನ್ನು ಬಿಸಿಸಿಐ ಬೇರೆಡೆಗೆ ಸ್ಥಳಾಂತರಿಸಿದೆ. ಇದರಿಂದ


ಆರ್‌ಸಿಬಿ ಹಾಗೂ ಕ್ರಿಕೆಟ್ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿದೆ.
ಯಸ್, ಇಲ್ಲಿನ ಎಂ ಚಿನ್ನಸ್ವಾಮಿ (M Chinnaswamy Stadium) ಕ್ರೀಡಾಂಗಣಕ್ಕೆ 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯ ಫೈನಲ್ ಹಾಗೂ ಪ್ಲೇಆಫ್ಸ್ ಪಂದ್ಯಗಳ ಆತಿಥ್ಯ ಕೈತಪ್ಪಿದೆ. ಇದುವರೆಗೂ ಬಿಸಿಸಿಐ (BCCI) ಕೂಡ ಐಪಿಎಲ್ ಆರಂಭಕ್ಕೂ ಮುನ್ನವೇ ಬೆಂಗಳೂರಿನಲ್ಲಿ ಐಪಿಎಲ್ ಫೈನಲ್ ನಡೆಸಲು ನಿರ್ಧರಿಸಿತ್ತು. ಇತ್ತ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕೂಡ ಐಪಿಎಲ್ ಫೈನಲ್ಗೆ ಸಕಲ ತಯಾರಿ ಮಾಡಿಕೊಂಡಿತ್ತು. ಆದರೆ ಲೀಗ್ ಪಂದ್ಯಗಳು ಮುಗಿಯುವುದಕ್ಕೂ ಮುನ್ನ ಪ್ಲೇಆಫ್ ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಿರುವ ಬಿಸಿಸಿಐ, ಪ್ಲೇಆಫ್ ಹಾಗೂ ಫೈನಲ್ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸಿದೆ. ಈ ಬಗ್ಗೆ ಬಿಸಿಸಿಐ ಕೂಡ ಹೇಳಿಕೆ ಬಿಡುಗಡೆ ಮಾಡಿದೆ.
ಪ್ಲೇ-ಆಫ್ ಪಂದ್ಯಗಳನ್ನು ಬೇರೆ ಕೇಂದ್ರಗಳಿಗೆ ನೀಡಿರುವ ಕುರಿತು ಬಿಸಿಸಿಐ ಯಾವುದೇ ಅಧಿಕೃತ ಕಾರಣ ತಿಳಿಸಿಲ್ಲ ಎಂದು ಕೆಎಸ್‌ಸಿಎ ಹೇಳಿದೆ. ಆದರೂ, ಬಿಸಿಸಿಐಗೆ ಈ ನಿರ್ಧಾರ ಕೈಗೊಳ್ಳುವ ಸಂಪೂರ್ಣ ಅಧಿಕಾರವಿದ್ದು, ಅದನ್ನು ನಾವು ಗೌರವಿಸುತ್ತೇವೆ ಎಂದು ಸ್ಪಷ್ಟಪಡಿಸಿದೆ.
[ad_2]
Source link


















Leave a Reply