Advertisement

ಒಂದು ತಿಂಗಳ ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ » Dvgsuddi Kannada | online news portal

[ad_1]

ಶಿವಮೊಗ್ಗ: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗದ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಮೇ 15 ರಿಂದ ಜೂನ್ 13ರವರೆಗೆ 1 ತಿಂಗಳು ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ದಿ ತರಬೇತಿಯನ್ನು ಆಯೋಜಿಸಿದೆ.

ದಾವಣಗೆರೆ: ಸಾರ್ವಜನಿಕರಿಂದ ಅಧಿಕ ಹಣ ವಸೂಲಿ; ಮಹಾನಗರ ಪಾಲಿಕೆ ವಲಯ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ತರಬೇತಿಯಲ್ಲಿ ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್ ಕೇಕ್, ಪೇಸ್ಟ್ರೀ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ್ ಬ್ರೆಡ್, ಬನ್, ರಸ್ಕ್, ಪಿಜ್ಜಾ, ಪಪ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದ್ದು, ಆಸಕ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಮೇ.14 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವುದು.

ದಾವಣಗೆರೆ: ಪ್ರಧಾನಮಂತ್ರಿ ವಸತಿ ಯೋಜನೆಯಡಿ ಜಿಲ್ಲೆಗೆ 3,376 ಮನೆ ಮಂಜೂರು; 4 ಮದರಸಾಗಳ ಅಭಿವೃದ್ಧಿಗೆ 2 ಕೋಟಿ ಅನುದಾನ; ಜಿಲ್ಲಾಧಿಕಾರಿ

ತರಬೇತಿ ಸಮಯದಲ್ಲಿ ಊಟ ಮತ್ತು ವಸತಿ ಸೌಲಭ್ಯ ಇರುವುದಿಲ್ಲ ಎಂದು ಕಾಲೇಜಿನ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. ಮೊ.ಸಂ. 9449187763 ಮತ್ತು ಜಯಶಂಕರ 9686555897 ಇವರುಗಳನ್ನು ಸಂಪರ್ಕಿಸುವುದು.

[ad_2]

Source link

Leave a Reply

Your email address will not be published. Required fields are marked *