Advertisement

ಬೆಂಗಳೂರು ಸೇರಿ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್‌

[ad_1]

ಬೆಂಗಳೂರು: ಇಂದು (ಮೇ 8) ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿ ರಾಜ್ಯದ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಿಗೆ ʼಯೆಲ್ಲೋ ಅಲರ್ಟ್‌ʼ ಘೋಷಣೆ ಮಾಡಿದೆ.

ಹವಾಮಾನಾ ಇಲಾಖೆ ನೀಡಲಾಗಿರುವ ಅಧಿಕೃತ ಮಾಹಿತಿಯ ಅನುಸಾರ, ಉತ್ತರ ತೆಲಂಗಾಣ ಮತ್ತು ಮನ್ನಾರ್‌ ಕೊಲ್ಲಿಯ ಮೇಲ್ಭಾಗದಲ್ಲಿ ಪ್ರಬಲವಾದ ಸುಳಿಗಾಳಿ ಉಂಟಾಗಿದ್ದು ಇದರ ಪರಿಣಾಮ ಉತ್ತರ ಒಳನಾಡಿನಿಂದ ಮನ್ನಾರ್‌ ಕೊಲ್ಲಿಯವರೆಗೆ ವಾಯುಭಾರ ಕುಸಿತ ನಿರ್ಮಾಣವಾಗಿದೆ.

ಈ ಹವಾಮಾನ ವೈಪರೀತ್ಯದ ಪ್ರಭಾವವಿಂದಾಗಿ ಅರಬ್ಬಿ ಸಮುದ್ರದಿಂದ ತೇವಾಂಶ ಭರಿತ ತಂಪಾದ ಗಾಳಿ ರಾಜ್ಯದತ್ತ ಬೀಸುತ್ತಿದ್ದು, ಕರ್ನಾಟಕದಾದ್ಯಂತ ಮಳೆಗೆ ವಾತಾವರಣ ಸೃಷ್ಟಿಯಾಗಿದೆ. ಇದರಿಂದಾಗಿ ಕೇವಲ ದಕ್ಷಿಣ ಒಳನಾಡು ಮಾತ್ರವಲ್ಲದೇ, ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲೂ ವ್ಯಾಪಕ ಮಳೆಯಾಗುತ್ತಿದೆ.

ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಭಾಗಗಳಲ್ಲಿ ವರುಣ ಅಬ್ಬರಿಸಲಿದ್ದು, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

banner

ಕರಾವಳಿ ಭಾಗಗಳಾದ ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್‌ ಮುಂದುವರಿಸಲಾಗಿದೆ. ಮಧ್ಯ ಕರ್ನಾಟಕ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಹಾಗೂ ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಜಿಲ್ಲೆಗಳಲ್ಲೂ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.



[ad_2]

Source link

Leave a Reply

Your email address will not be published. Required fields are marked *