Advertisement

ಬೆಳಗಾವಿ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

[ad_1]

Fire breaks out at plastic factory in Belgavi

ಬೆಳಗಾವಿ: ಜಿಲ್ಲೆಯ ಬೆಳಗಾವಿ (Belagavi) ತಾಲೂಕಿನ ಹೊನಗಾ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ತಡರಾತ್ರಿ ಭೀಕರ ಅಗ್ನಿ (Fire) ಅವಘಡ ಸಂಭವಿಸಿದೆ.

ಇಲ್ಲಿನ ಡಾಂಗೆ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ (Plastic Factory) ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಯಂತ್ರೋಪಕರಣಗಳು ಸುಟ್ಟು ಕರಕಲಾಗಿವೆ.

ತಡರಾತ್ರಿ ಕಂಪನಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳು ಹೆಚ್ಚಾಗಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲಿ ಕಾರ್ಖಾನೆಯಾದ್ಯಂತ ವ್ಯಾಪಿಸಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಮಯಪ್ರಜ್ಞೆಯಿಂದಾಗಿ ಬೆಂಕಿ ಪಕ್ಕದ ಕಾರ್ಖಾನೆಗಳಿಗೆ ಹರಡುವುದು ತಪ್ಪಿದ್ದು, ದೊಡ್ಡ ಮಟ್ಟದ ಅನಾಹುತವನ್ನು ತಡೆದಂತಾಗಿದೆ. ಇದನ್ನೂ ಓದಿ: ಪಂಜಾಬ್‌ ಸರಣಿ ಸ್ಫೋಟಕ್ಕೆ ಖಲಿಸ್ತಾನ್, ISI ಲಿಂಕ್‌ – ಹಿಂದೆ ನಡೆದ ಸ್ಫೋಟಗಳು ಯಾವುವು? 

ಪ್ರಾಥಮಿಕ ವರದಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರ್ಖಾನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ಹಾಗೂ ಸಿದ್ಧಪಡಿಸಿದ ಉತ್ಪನ್ನಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಪ್ರಸ್ತುತ ಈ ಘಟನೆಯು ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿ ಅವಘಡದಿಂದಾದ ನಿಖರವಾದ ಹಾನಿಯ ಮೊತ್ತದ ಬಗ್ಗೆ ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ.

[ad_2]

Source link publictv.in

Leave a Reply

Your email address will not be published. Required fields are marked *