Advertisement

ಮೋದಿ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ

[ad_1]

siddaramaiah 2

ಬೆಂಗಳೂರು: ಪ್ರಧಾನಿ ಕುರ್ಚಿಯ ಘನತೆ, ಗಾಂಭಿರ್ಯ ಮತ್ತು ಔಚಿತ್ಯವನ್ನು ನರೇಂದ್ರ ಮೋದಿಯವರು ತಮ್ಮ ಸುಳ್ಳು, ಕೀಳು ಅಭಿರುಚಿ, ದ್ವೇಷ, ಅಸೂಯೆಗಳನ್ನು ವ್ಯಕ್ತಪಡಿಸುವ ಭಾಷಣಗಳ ಮೂಲಕ ಮಣ್ಣುಪಾಲು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (NarendraModi) ಅವರು ಭಾನುವಾರ (ಮೇ 10) ಬೆಂಗಳೂರಿನಲ್ಲಿ ಭಾಷಣ ಮಾಡಿ, ಕರ್ನಾಟಕದ ಸಿಎಂ ಇನ್ನೆಷ್ಟು ದಿನ ಅಧಿಕಾರದಲ್ಲಿ ಇರ್ತಾರೋ ಎಂದಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆ ಮೂಲಕ ತಿರುಗೇಟು ಕೊಟ್ಟಿದ್ದಾರೆ. ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಇಲ್ಲವೇ ರಾಜ್ಯ ಬಿಜೆಪಿ ಅಧ್ಯಕ್ಷರೋ? ಇಲ್ಲವೇ ರಾಜ್ಯದ ವಿರೋಧ ಪಕ್ಷದ ನಾಯಕರಾಗಿಯೋ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಿ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲವನ್ನು ಬಗೆಹರಿಸಬೇಕು ಎಂದು ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಮೋದಿ ಭಸ್ಮಾಸುರ, ಅವರ ಕುರ್ಚಿ ಗಟ್ಟಿ ಇದೆಯೇ ಎಂದು ನೋಡಿಕೊಳ್ಳಲಿ: ಬಿ.ಕೆ ಹರಿಪ್ರಸಾದ್ ವಾಗ್ದಾಳಿ

Narendra Modi 1

ತನ್ನ ಎಲೆ ಮೇಲೆ ಆನೆ ಸತ್ತು ಬಿದ್ದಿದ್ದರೂ ಎದುರಿನವರ ಎಲೆ ಮೇಲೆ ಸತ್ತು ಬಿದ್ದ ನೊಣವನ್ನು ಹುಡುಕಾಡುವ ಢೋಂಗಿ ಬುದ್ಧಿಯೂ ಅವರ ಭಾಷಣದಲ್ಲಿ ಇತ್ತು. ನೆಹರೂ, ಇಂದಿರಾಗಾಂಧಿ, ವಾಜಪೇಯಿ ಸೇರಿದಂತೆ ದೇಶದ ಪ್ರಧಾನಮಂತ್ರಿಯಾದವರು ಎಂದೂ ಕೆಟ್ಟ ರಾಜಕಾರಣಿಗಳ ರೀತಿ ಬೀದಿ ಭಾಷಣ ಮಾಡಿ ವಿರೋಧ ಪಕ್ಷಗಳನ್ನು ಹಳಿಯಲು ಹೋಗಿಲ್ಲ. ಅವರೆಲ್ಲರೂ ಕಾಪಾಡಿಕೊಂಡು ಬಂದಿದ್ದ ಪ್ರಧಾನಿ ಕುರ್ಚಿಯ ಘನತೆ, ಗಾಂಭಿರ್ಯ ಮತ್ತು ಔಚಿತ್ಯವನ್ನು ನರೇಂದ್ರ ಮೋದಿಯವರು ಮಣ್ಣುಪಾಲು ಮಾಡುತ್ತಿದ್ದಾರೆ. ಬೆಂಗಳೂರಿಗೆ ಬಂದಿದ್ದ ಅವರು ಇನ್ನೂ ಪಂಚ ರಾಜ್ಯಗಳ ಚುನಾವಣಾ ರ‍್ಯಾಲಿಗಳ ಗುಂಗಿನಲ್ಲಿಯೇ ಇದ್ದಂತೆ ಕಂಡರು ಎಂದು ವ್ಯಂಗ್ಯವಾಡಿದ್ದಾರೆ.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಖಾದ್ಯತೈಲ ಎಲ್ಲವೂ ದುಬಾರಿಯಾಗಿ ದೇಶದ ಜನರ ನಿತ್ಯದ ಜೀವನ ನಿರ್ವಹಣೆಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣಕ್ಕೆ ದೇಶದ ಎಡಬಿಡಂಗಿ ವಿದೇಶಾಂಗ ನೀತಿ ಕಾರಣ ಎನ್ನುವುದನ್ನು ಅರಿತುಕೊಳ್ಳುವಷ್ಟು ಜನತೆ ಪ್ರಬುದ್ಧರಾಗಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದೆ. ದೇಶದ ತಲಾವಾರು ಆದಾಯ ರೂ.2.11 ಲಕ್ಷ ರೂ.ಗಳಾಗಿದ್ದರೆ ಕರ್ನಾಟಕದ್ದು 4.33 ಲಕ್ಷ ರೂಪಾಯಿಗಳು. ದೇಶದ ಜಿಡಿಪಿ ಬೆಳವಣಿಗೆಯ ದರ ಶೇಕಡಾ 7.4 ಆಗಿದ್ದರೆ, ಕರ್ನಾಟಕದ್ದು ಶೇಕಡಾ 8.1 ಆಗಿದೆ. ದೇಶದ ಜಿಡಿಪಿಯಲ್ಲಿ ಕರ್ನಾಟಕದ ಪಾಲು ಶೇಕಡಾ 9.19 ಆಗಿದೆ. ಜಿಎಸ್‍ಟಿ ಸಂಗ್ರಹದಲ್ಲಿ ಮಹಾರಾಷ್ಟ್ರದ ನಂತರ ಕರ್ನಾಟಕದ್ದೇ ಹೆಚ್ಚಿನ ಪಾಲು ಎಂದಿದ್ದಾರೆ. ಇದನ್ನೂ ಓದಿ: ಭಾರತೀಯರೇ ಒಂದು ವರ್ಷ ಚಿನ್ನ ಖರೀದಿಸಬೇಡಿ: ಮೋದಿ ಕರೆ

[ad_2]

Source link publictv.in

Leave a Reply

Your email address will not be published. Required fields are marked *