Advertisement

ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವು

[ad_1]

Yadgiri Girl Died Due to wall collapse

ಯಾದಗಿರಿ: ವರುಣನ (Rain) ಅಬ್ಬರಕ್ಕೆ ಮನೆ ಗೋಡೆ ಕುಸಿದು (Wall Collapse) ಬಾಲಕಿ ಸಾವನ್ನಪ್ಪಿರುವ ಘಟನೆ ಯಾದಗಿರಿ (Yadgiri) ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ.

ಸೋಮವಾರ ಸುರಿದ ಭಾರೀ ಮಳೆಗೆ ಸಿದ್ದಪ್ಪ ಅವರ ಅಡುಗೆ ಮನೆಯ ಗೋಡೆ ಕುಸಿದು ಅಕ್ಷತಾ (8) ಮೃತಪಟ್ಟಿದ್ದಾಳೆ. ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಮನೆ ಗೋಡೆ ಕುಸಿದಿದೆ. ಈ ವೇಳೆ ಬಾಲಕಿ ಅಕ್ಷತಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಯೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬಂಗಾಳದ ಮುಖ್ಯ ಚುನಾವಣಾಧಿಕಾರಿ ಈಗ ಬಿಜೆಪಿ ಸರ್ಕಾರದ ಸಿಎಸ್‌- ಇದು ನಾಚಿಕೆಗೇಡು ಎಂದ ಟಿಎಂಸಿ

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿಪಂ ಸಿಇಓ ಲವೀಶ್ ಒರಡಿಯಾ, ಎಸ್ಪಿ ಪೃಥ್ವಿಕ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಡಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಮೋದಿ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ


[ad_2]

Source link publictv.in

Leave a Reply

Your email address will not be published. Required fields are marked *