Advertisement

ರಾಮನಗರದ ಫಾರ್ಮ್‌ಹೌಸ್‌ನಲ್ಲಿ ನಡೆಯಲಿದೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ | Public TV

[ad_1]

`ಹಿಟ್ಲರ್ ಕಲ್ಯಾಣ’ ಧಾರಾವಾಹಿ ಖ್ಯಾತಿಯ ನಟ ದಿಲೀಪ್ ರಾಜ್ (Actor Dileep Raj) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು (ಮೇ 13) ಸಂಜೆ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ರಾಮನಗರ (Ramanagar) ತಾಲೂಕಿನ ಗುನ್ನೂರು (Gunnur) ಗ್ರಾಮದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಕೆಲಸಗಾರರು ಹಾಗೂ ಗ್ರಾಮಸ್ಥರು ಗುಂಡಿತೋಡುವ ಕಾರ್ಯ ಆರಂಭಿಸಿದ್ದಾರೆ. ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಹಿಟ್ಲರ್ ಪಾತ್ರದಂತೆ ನಿಜಜೀವನದಲ್ಲೂ ಸ್ಟ್ರಿಕ್ಟ್ – ದಿಲೀಪ್ ರಾಜ್ ನೆನೆದು ನಟ ನವೀನ್ ಕೃಷ್ಣ ಭಾವುಕ

10 ವರ್ಷಗಳ ಹಿಂದೆ ನಟ ದಿಲೀಪ್ ರಾಜ್ 1 ಎಕರೆ ಜಮೀನು ಖರೀದಿಸಿದ್ದರು. ಅಲ್ಲಿ ತೋಟ ನಿರ್ಮಾಣ ಮಾಡಿಕೊಂಡು ಮನೆ ಕಟ್ಟಿದ್ದರು. ತಿಂಗಳಿಗೊಮ್ಮೆ ಫಾರ್ಮ್‌ಹೌಸ್‌ಗೆ ಭೇಟಿ ನೀಡುತ್ತಿದ್ದರು. ಇಂದು ಬೆಳಗಿನ ಜಾವ ದಿಲೀಪ್ ರಾಜ್‌ಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ದಿಲೀಪ್ ರಾಜ್ ಅವರ ಮೃತದೇಹ ಕುಮಾರಸ್ವಾಮಿ ಲೇಔಟ್‌ನ ಅಪೋಲೊ ಆಸ್ಪತ್ರೆಯಲ್ಲಿರಿಸಲಾಗಿದೆ. ದಿಲೀಪ್ ನಿಧನಕ್ಕೆ ಕನ್ನಡ ಚಿತ್ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದರು.

ಸುಗ್ರೀವ, ಗೆಳೆಯ, ಯೂಟರ್ನ್, ಸೇರಿದಂತೆ 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಸದ್ಯ ಜನಪ್ರಿಯ ಧಾರಾವಾಹಿ `ಕೃಷ್ಣ ರುಕ್ಕು’ ಧಾರವಾಹಿ ಪ್ರೊಡ್ಯೂಸ್ ಮಾಡುತ್ತಿದ್ದರು. 47 ವರ್ಷದ ದಿಲೀಪ್ ರಾಜ್ ಕೊನೆಯದಾಗಿ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಮನೆಯೊಂದು ಮೂರು ಬಾಗಿಲು, ರಥಸಪ್ತಮಿ, ಪ್ರೀತಿಗಾಗಿ ಧಾರಾವಾಹಿಗಳಲ್ಲೂ ನಟಿಸಿದ್ದರು.ಇದನ್ನೂ ಓದಿ: ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಖ್ಯಾತಿಯ ದಿಲೀಪ್ ರಾಜ್ ನಿಧನ

[ad_2]

Source link publictv.in

Leave a Reply

Your email address will not be published. Required fields are marked *