Advertisement

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ಮನೆಗೆ ವಾಪಸ್

[ad_1]

SONIA GANDHI 1

ನವದೆಹಲಿ: ಕಾಂಗ್ರೆಸ್ (Congress) ಹಿರಿಯ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರು ಬುಧವಾರ ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಈ ಕುರಿತು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಮಾಹಿತಿ ನೀಡಿದ್ದಾರೆ.

ಮಂಗಳವಾರ ತಡರಾತ್ರಿ ಸೋನಿಯಾ ಗಾಂಧಿ ಅವರನ್ನು ಗುರುಗ್ರಾಮ್‌ನ (Gurugram) ಮೆದಾಂತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೊಟ್ಟೆ ಹಾಗೂ ಮೂತ್ರದ ಸೋಂಕಿನ ಅನುಮಾನ ಹಿನ್ನೆಲೆ ವೈದ್ಯರು ವಿವಿಧ ಪರೀಕ್ಷೆಗಳನ್ನು ನಡೆಸಿದ್ದರು. ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇದಕ್ಕೂ ಮೊದಲು ಮಾರ್ಚ್ 24ರಂದು ಜ್ವರ ಮತ್ತು ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಸೋನಿಯಾ ಗಾಂಧಿ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲೂ ಹೊಟ್ಟೆಗೆ ಸಂಬಂಧಿಸಿದ ತೊಂದರೆಯಿಂದ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದರು. ಗ್ಯಾಸ್ಟ್ರೋಎಂಟರಾಲಜಿ ವಿಭಾಗದಲ್ಲಿ ಅವರನ್ನು ವೀಕ್ಷಣೆಯಲ್ಲಿ ಇರಿಸಲಾಗಿತ್ತು. 2025ರ ಜೂನ್ 7ರಂದು ಅವರನ್ನು ಆಸ್ಪತ್ರೆಯಲ್ಲೂ ದಾಖಲಿಸಲಾಗಿತ್ತು.

[ad_2]

Source link publictv.in

Leave a Reply

Your email address will not be published. Required fields are marked *