Advertisement

ಲಿಂಗಾಯತ ಸಂಪ್ರದಾಯದಂತೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ

[ad_1]

Dileep Raj 2

ರಾಮನಗರ: ಹೃದಯಾಘಾತದಿಂದ (Heart Attack) ನಿಧನರಾದ ನಟ, ನಿರ್ಮಾಪಕ ದಿಲೀಪ್ ರಾಜ್ (Actor Dileep Raj) ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ರಾಮನಗರ (Ramanagar) ತಾಲೂಕಿನ ಗುನ್ನೂರು (Gunnur) ಬಳಿಯ ಫಾರ್ಮ್‌ ಹೌಸ್‌ನಲ್ಲಿ ನೆರವೇರಿತು.

ಸಮಯ ಸಿಕ್ಕಾಗಲೆಲ್ಲಾ ಇಲ್ಲಿನ ತೋಟದ ಮನೆಗೆ ದಿಲೀಪ್ ರಾಜ್‍ ಬರುತ್ತಿದ್ದರು. ಹಳೇ ಶೈಲಿಯಲ್ಲಿ ತೊಟ್ಟಿ ಮನೆ ನಿರ್ಮಾಣ ಮಾಡಿಕೊಂಡಿದ್ದರು. ಗ್ರಾಮಸ್ಥರ ಜೊತೆಗೂ ಉತ್ತಮ ಒಡನಾಟ ಹೊಂದಿದ್ದರು. ಹೀಗಾಗಿ ಇಲ್ಲೇ ಅವರ ಅಂತ್ಯಕ್ರಿಯೆ ಮಾಡಲಾಗಿದೆ.

Dileep Raj 1

ಅಂತ್ಯಕ್ರಿಯೆಗೂ ಮುನ್ನ ರೇವಣಸಿದ್ದೇಶ್ವರ ಮಠದ ರಾಜಶೇಖರ ಸ್ವಾಮೀಜಿ ನೇತೃತ್ವದಲ್ಲಿ, ದಿಲೀಪ್ ರಾಜ್ ಅಣ್ಣನ ಮಗನಿಂದ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಇದನ್ನೂ ಓದಿ: ರಾಮನಗರದ ಫಾರ್ಮ್‌ಹೌಸ್‌ನಲ್ಲಿ ನಡೆಯಲಿದೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ

ದಿಲೀಪ್ ರಾಜ್ ಅಂತ್ಯಕ್ರಿಯೆಯಲ್ಲಿ ನಟ ಸೃಜನ್ ಲೋಕೇಶ್, ನಟಿ ಅನುಪ್ರಭಾಕರ್, ರಘುಮುಖರ್ಜಿ, ಕಾಮಿಡಿ ಕಿಲಾಡಿ ಖ್ಯಾತಿಯ ಜಗಪ್ಪ, ಸೃಜನ್, ಮಂಜುಪಾವಗಡ, ಹುಲಿ ಕಾರ್ತಿಕ್ ಸೇರಿ ಕಿರುತೆರೆ ಕಲಾವಿದರು ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ಭಾಗಿಯಾಗಿದ್ದರು. ಈ ವೇಳೆ ಪಾರ್ಥಿವ ಶರೀರದ ಎದುರು ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

Dileep Raj 3

ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದರು.

ಸುಗ್ರೀವ, ಗೆಳೆಯ, ಯೂಟರ್ನ್, ಸೇರಿದಂತೆ 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಸದ್ಯ ಜನಪ್ರಿಯ ಧಾರಾವಾಹಿ `ಕೃಷ್ಣ ರುಕ್ಕು’ ಧಾರವಾಹಿ ಪ್ರೊಡ್ಯೂಸ್ ಮಾಡುತ್ತಿದ್ದರು. 47 ವರ್ಷದ ದಿಲೀಪ್ ರಾಜ್ ಕೊನೆಯದಾಗಿ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಮನೆಯೊಂದು ಮೂರು ಬಾಗಿಲು, ರಥಸಪ್ತಮಿ, ಪ್ರೀತಿಗಾಗಿ ಧಾರಾವಾಹಿಗಳಲ್ಲೂ ನಟಿಸಿದ್ದರು. ಇದನ್ನೂ ಓದಿ: ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಖ್ಯಾತಿಯ ದಿಲೀಪ್ ರಾಜ್ ನಿಧನ

[ad_2]

Source link publictv.in

Leave a Reply

Your email address will not be published. Required fields are marked *