Advertisement

ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್

[ad_1]

ಮಂಗಳೂರಲ್ಲಿ ಬಿಸಿಎ ವಿದ್ಯಾರ್ಥಿನಿಯೊಬ್ಬಳು ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನಿಸಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ 35ಲಕ್ಷ ರೂ‌. ಮೌಲ್ಯದ 1.42 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. 

ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ, ಸದ್ಯ ಕುಂದಾಪುರ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸುಹಾನ (21) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಮಂಗಳವಾರ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಈಕೆಯನ್ನು ಬಂಧಿಸಿದ್ದಾರೆ.

ಬಂಧಿತ ವಿದ್ಯಾರ್ಥಿನಿಯಿಂದ ಸುಮಾರು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವಿಡ್ ಗಾಂಜಾ ಎಂಬ ಅತೀ ದುಬಾರಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.  ಸುಹಾನ ಈ ಮಾದಕ ವಸ್ತುವನ್ನು ಚೆನ್ನೈನಿಂದ ಮಂಗಳೂರಿಗೆ ತರಿಸಿಕೊಂಡಿದ್ದಳು. ಇಲ್ಲಿನ ಕಾಲೇಜು ವಿದ್ಯಾರ್ಥಿಗಳು ಹಾಗೂ ಶ್ರೀಮಂತ ಗ್ರಾಹಕರಿಗೆ ಇದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಗಳಿಸಲು ಮುಂದಾಗಿದ್ದಳು ಎನ್ನಲಾಗಿದೆ. ಕೇವಲ 21 ವರ್ಷದ ಈ ವಿದ್ಯಾರ್ಥಿನಿ ಈಗಾಗಲೇ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಈ ಕುರಿತು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದು, ಮೇ 12ರಂದು ಮಾರಾಟ ಮಾಡಲೆಂದು ಸುಹಾನ ಹೈಡ್ರೋವೀಡ್ ಗಾಂಜಾವನ್ನು ಸಾಗಿಸುತ್ತಿದ್ದಳು. ಖಚಿತ ಮಾಹಿತಿ ಮೇರೆಗೆ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಠಾಣೆಯ ಪೊಲೀಸರು ತಂಡ ಕಾರ್ಯಾಚರಣೆ ನಡೆಸಿ ಮಂಗಳೂರು ನಗರದ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ದಾಳಿ ನಡೆಸಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

banner



[ad_2]

Source link

Leave a Reply

Your email address will not be published. Required fields are marked *