Advertisement

ಹೀನಾಯ ಸೋಲಿನ ಬಳಿಕ ಮತ್ತೆ ಶಾಕ್ – SRH ನಾಯಕ ಪ್ಯಾಟ್ ಕಮ್ಮಿನ್ಸ್‌ಗೆ 12 ಲಕ್ಷ ದಂಡ

[ad_1]

Pat Cummins

ಅಹಮದಾಬಾದ್: ಗುಜರಾತ್ ವಿರುದ್ಧ ಆಲೌಟ್ ಆಗಿ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ಹೀನಾಯವಾಗಿ ಸೋಲುಂಡಿದೆ. ನಾಯಕ ಪ್ಯಾಟ್ ಕಮ್ಮಿನ್ಸ್‌ಗೆ (Pat Cummins) ಬಿಸಿಸಿಐ ಶಾಕ್ ನೀಡಿದ್ದು, 12 ಲಕ್ಷ ರೂ. ದಂಡ ವಿಧಿಸಿದೆ.

ಬುಧವಾರ (ಮೇ 12) ಗುಜರಾತ್ ಜೆಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ನಿಧಾನಗತಿಯ ಓವರ್ ಕಾಯ್ದುಕೊಂಡಿದ್ದಕ್ಕಾಗಿ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್‌ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದನ್ನೂ ಓದಿ: ಯುರೋಪಿಯನ್ ಟಿ20 ಲೀಗ್‌ನಲ್ಲಿ ತಂಡ ಖರೀದಿಸಿದ ರಾಹುಲ್ ದ್ರಾವಿಡ್

ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22ರ ಅಡಿಯಲ್ಲಿ ಕನಿಷ್ಠ ಓವರ್ ರೇಟ್‌ಗೆ ಸಂಬಂಧಿಸಿದ್ದು, ಈ ಸೀಸನ್‌ನಲ್ಲಿ ಪ್ಯಾಟ್ ಕಮ್ಮಿನ್ಸ್ ಮೊದಲ ಬಾರಿ ನೀತಿ ಉಲ್ಲಂಘಿಸಿದ್ದಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಎಸ್‌ಆರ್‌ಎಚ್ ತಂಡ ಜಿಟಿ ವಿರುದ್ಧ 82 ರನ್‌ಗಳ ಹೀನಾಯ ಸೋಲು ಅನುಭವಿಸಿದೆ.ಇದನ್ನೂ ಓದಿ: 86 ರನ್‌ಗೆ ಎಸ್‌ಆರ್‌ಹೆಚ್‌ ಆಲೌಟ್‌; ಟೈಟನ್ಸ್‌ ಬೌಲರ್‌ಗಳ ಪರಾಕ್ರಮಕ್ಕೆ ಭರ್ಜರಿ ಜಯ – ಪ್ಲೇಆಫ್‌ಗೆ ಇನ್ನೊಂದೇ ಹೆಜ್ಜೆ


[ad_2]

Source link publictv.in

Leave a Reply

Your email address will not be published. Required fields are marked *