Advertisement

ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ ರಾಜೀನಾಮೆ!!

[ad_1]

ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ ಅವರು ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ, ಸುವೇಂದು ಅಧಿಕಾರಿ ಅವರು ನಂದಿಗ್ರಾಮ್ ಜೊತೆಗೆ ಭವಾನಿಪುರ ವಿಧಾನಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಅವರು ಎರಡೂ ಸ್ಥಾನಗಳನ್ನು ಗೆದ್ದಿದ್ದರು, ಹೀಗಾಗಿ ಅವರು ಒಂದು ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿದೆ. ಈ ಹಿನ್ನೆಲೆ ಅವರು ನಂದಿಗ್ರಾಮ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಭವಾನಿಪುರದ ಶಾಸಕರಾಗಿ ಉಳಿದುಕೊಂಡು ಮುಖ್ಯಮಂತ್ರಿಯಾಗಿ ಮುಂದುವರಿಯಲು ನಿರ್ಧರಿಸಿದ್ದಾರೆ.

ವಿಧಾನಸಭೆಯ ನಿಯಮಗಳ ಪ್ರಕಾರ ನಿಗದಿಪಡಿಸಲಾದ ಕಡ್ಡಾಯ 14 ದಿನಗಳ ಅವಧಿಯೊಳಗೆ ಅಧಿಕಾರಿ ಅವರು ರಾಜೀನಾಮೆಯನ್ನು ಸಭಾಪತಿ ರತೀಂದ್ರ ಬೋಸ್ ಅವರಿಗೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.



[ad_2]

Source link

Leave a Reply

Your email address will not be published. Required fields are marked *