[ad_1]

ಕೊಪ್ಪಳ: ಟ್ರ‍್ಯಾಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ ಏಳು ಮಂದಿ ಸಾವನ್ನಪ್ಪಿರುವ ದುರ್ಘಟನೆ ಕೊಪ್ಪಳ (Koppal) ಜಿಲ್ಲೆಯ ಮುನಿರಾಬಾದ್ (Munirabad) ಬಳಿ ನಡೆದಿದೆ.
ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳಾದ ಕೆಂಚಪ್ಪ (35), ಮಹಾಂತೇಶ್ (18) ಭರತ್ (01) ಸವಿತಾ (12) ಮಾರೇಶ್, ಗೌರಮ್ಮ, ಮಂಜಮ್ಮ ಮೃತರು. ಇದನ್ನೂ ಓದಿ: ಆರ್‌ಜಿ ಕರ್ ರೇಪ್ & ಮರ್ಡರ್ ಕೇಸ್ – ತನಿಖೆಯ ಹಾದಿ ತಪ್ಪಿಸಿದ ಮೂವರು IPS ಅಧಿಕಾರಿಗಳು ಸಸ್ಪೆಂಡ್: ಸಿಎಂ
50ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಹಿಂದಿನಿಂದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಟ್ರ‍್ಯಾಕ್ಟರ್ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಪರಿಣಾಮ ಮಗು ಸೇರಿ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ.
ಸದ್ಯ ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಅಥವಾ ಬೆಂಗಳೂರು ಆಸ್ಪತ್ರೆಗೆ ದಾಖಲಿಸುವ ಸಂಭವವಿದೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಜಯನಗರ ಎಸ್ಪಿ ಜಾಹ್ನವಿ ಹಾಗೂ ಹೊಸಪೇಟೆ ಡಿವೈಎಸ್ಪಿ ಕೆಪಿ ಮುರಳೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಪ್ಪಳ ಆಸ್ಪತ್ರೆಗೆ ಎಸ್ಪಿ ಎಲ್ ಅರಸಿದ್ದಿ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.ಇದನ್ನೂ ಓದಿ: 2025ರ ನೀಟ್ ಪರೀಕ್ಷೆಯಲ್ಲಿ ಒಂದೇ ಕುಟುಂಬದ ಐವರು ಪಾಸ್ – ಪ್ರಶ್ನೆ ಪತ್ರಿಕೆ ಸೋರಿಕೆ ಕೇಸಲ್ಲಿ ಮೂವರು ಅರೆಸ್ಟ್
[ad_2]
Source link publictv.in

















Leave a Reply