[ad_1]
5
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಜೂನ್ 21 ರಂದು ನೀಟ್-ಯುಜಿ ಮರುಪರೀಕ್ಷೆ ನಡೆಸಲಿದೆ ಎಂದು ಈಗಾಗಲೇ ಘೋಷಿಸಿದೆ. ಇದರ ಬೆನ್ನಲ್ಲೇ ಪಾರದರ್ಶಕತೆ ತರಲು ಮುಂದಿನ ವರ್ಷದಿಂದ ಈ ಪರೀಕ್ಷೆಯನ್ನ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮಾದರಿಯಲ್ಲಿ ನಡೆಸಲಾಗುತ್ತೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶುಕ್ರವಾರ ಮಹತ್ವದ ಘೋಷಣೆ ಮಾಡಿದ್ದಾರೆ.


ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ನೀಟ್ (CBT) ಪರೀಕ್ಷೆ ನಡೆಸಲಾಗುವುದು. ಪ್ರಶ್ನೆ ಪರೀಕ್ಷೆಯ ಸೋರಿಕೆಯ (Neet Paper Leak) ಜವಾಬ್ದಾರಿಯನ್ನು ತೆಗೆದುಕೊಂಡು ಪರೀಕ್ಷಾ ಮಾಫಿಯಾ ವಿರುದ್ಧ ಹೋರಾಡುತ್ತೇವೆ ಎಂದು ಹೇಳಿದ್ದಾರೆ.
ಅಲ್ಲದೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದರ ಜವಾಬ್ದಾರಿ ನಾವು ತೆಗೆದುಕೊಳ್ಳುತ್ತೇವೆ. ಸಚಿವಾಲಯ ಇದನ್ನು ಸರಿಪಡಿಸಲಿದೆ. ಮೇ 3ರಂದು ನಡೆಸಲಾಗಿದ್ದ ನೀಟ್ ಪರೀಕ್ಷೆಯನ್ನು ಈಗಾಗಲೇ ರದ್ದುಗೊಳಿಸಲಾಗಿದ್ದು, ಜೂನ್ 21ಕ್ಕೆ ಮರುಪರೀಕ್ಷೆ ದಿನಾಂಕ ನಿಗದಿಪಡಿಸಲಾಗಿದೆ. ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ವಿಧಾನದಲ್ಲಿ ನಡೆಸಲಾಗುವುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಅಲ್ಲದೆ NTA ಸಂಪೂರ್ಣ ಜವಾಬ್ದಾರಿ ಹೊತ್ತಿದೆ. NTA ಒಬ್ಬ ಸಮರ್ಥ ವ್ಯಕ್ತಿಯ ಕೈಯಲ್ಲಿದೆ. ಸುಪ್ರೀಂ ಕೋರ್ಟ್ ಶಿಫಾರಸಿನ ಮೇರೆಗೆ ಇದನ್ನ ರಚಿಸಲಾಗಿದೆ. ಇದು ಪ್ರತಿ ವರ್ಷ ಸುಮಾರು 1 ಕೋಟಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತೆ. NTA ಯಲ್ಲಿ ಶೂನ್ಯ ದೋಷ ಇರುವಂತೆ ನಾವು ನೋಡಿಕೊಳ್ಳುತ್ತೇವೆ” ಅಂತ ಅವರು ಹೇಳಿದ್ದಾರೆ. ಇದನ್ನ ಯಾವುದೇ ಒಂದು ಸಂಸ್ಥೆಯ ಸಮಸ್ಯೆಯಾಗಿ ನೋಡದೆ, ಪರೀಕ್ಷಾ ಪ್ರಕ್ರಿಯೆಗೆ ಸಂಬಂಧಿಸಿದ ಸವಾಲು ಅಂತ ಪರಿಗಣಿಸಬೇಕು ಅಂತಾನೂ ಅವರು ಸೇರಿಸಿದ್ದಾರೆ.
[ad_2]
Source link


















Leave a Reply