[ad_1]

ಮಡಿಕೇರಿ: ಮಧ್ಯಪ್ರಾಚ್ಯದಲ್ಲಿನ ಅಶಾಂತಿಯಿಂದಾಗಿ, ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟಿನ ಜೊತೆಗೆ, ತೈಲದ ಅಭಾವವೂ ಎದುರಾಗಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಿತವ್ಯಯದ ಕರೆ ನೀಡಿದ್ದರು. ಪ್ರಧಾನಿಯವರ ಕರೆಗೆ ರಾಜ್ಯದ ನಾಯಕರು ಸ್ಪಂಧಿಸಿದ್ದಾರೆ.

ಕೊಡಗಿನ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ತಮ್ಮ ಬೆಂಗಾವಲು ವಾಹನಗಳನ್ನ ಕಡಿತ ಮಾಡಿದ್ದಾರೆ. ಇದನ್ನೂ ಓದಿ: ಕೇಸರಿ ಶಾಲು ಧಾರ್ಮಿಕ ಸಂಕೇತವಲ್ಲ – ಸರ್ಕಾರದ ನಿಲುವು ಸಮರ್ಥಿಸಿಕೊಂಡ ಎ.ಎಸ್ ಪೊನ್ನಣ್ಣ
ಕೊಡಗು ಜಿಲ್ಲೆಯ ಪೊಲೀಸ್ ಇಲಾಖೆಯು ಕ್ಯಾಬಿನೆಟ್ ದರ್ಜೆಯ ಭದ್ರತೆ ಒದಗಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ತೈಲ ಬಿಕ್ಕಟ್ಟು ಸೃಷ್ಟಿಯಾಗುವ ಆತಂಕವಿದೆ. ಮತ್ತು ಪರಿಸರ ಮಾಲಿನ್ಯ ತಡೆಗಟ್ಟುವ ಸಂಬಂಧ ದೇಶದಲ್ಲಿ ನಿರ್ಮಾಣವಾಗಿರುವ ಆತಂಕದ ಪರಿಸ್ಥಿತಿ ನಿರ್ವಹಣೆ ಮಾಡುವ ಹಿನ್ನೆಲೆ ತಮ್ಮ ಬೆಂಗಾವಲು ವಾಹನ ಕಡಿತಗೊಳಿಸುವಂತೆ ಕೋರಿರುವುದಾಗಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
[ad_2]
Source link publictv.in

















Leave a Reply