Advertisement

ಮುಂದಿನ 3-4 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಸಿಕ್ಕಾಪಟ್ಟೆ ಮಳೆ!!

[ad_1]

ಬೇಸಿಗೆಯ ಬಿಸಿಲಿಗೆ ನಾಡಿನ ಜನರು ಬೆಂದು ಹೋಗಿದ್ದಾರೆ. ಆದ್ರೆ ಈ ನಡುವೆ ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 3 ರಿಂದ 4 ದಿನಗಳ ಕಾಲ (ಮೇ 15 ರಿಂದ 18 ರವರೆಗೆ) ಕರ್ನಾಟಕದಾದ್ಯಂತ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ?

ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ತುಮಕೂರು, ಮಂಡ್ಯ, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೇ 18 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದಲ್ಲಿ 64.5mm ನಿಂದ 115.5mm ವರೆಗೆ ಮಳೆ ದಾಖಲಾಗುವ ನಿರೀಕ್ಷೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

banner

ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ, ಗದಗ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಭಾರೀ ಏರುಪೇರಾಗಲಿದೆ. ಇಂದು ಮತ್ತು ನಾಳೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಭಾಗಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.



[ad_2]

Source link

Leave a Reply

Your email address will not be published. Required fields are marked *