[ad_1]
1
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಏಕಾಏಕಿ ಬೆಂಕಿಗಾಹುತಿಯಾದ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಸಮೀಪ ಶುಕ್ರವಾರ ತಡರಾತ್ರಿ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 36 ಮಂದಿ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಶುಕ್ರವಾರ ರಾತ್ರಿ 8.45 ಕ್ಕೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೊರಟಿದ್ದ ‘ಭರತ್’ ಹೆಸರಿನ ಖಾಸಗಿ ಬಸ್ ಹಾಸನದ ಶಾಂತಿಗ್ರಾಮ ಸಮೀಪಿಸುತ್ತಿದ್ದಂತೆ ಈ ಅವಘಡ ಸಂಭವಿಸಿದೆ. ಬಸ್ಸಿನ ಟೈಯರ್ ಸ್ಫೋಟಗೊಂಡ ಪರಿಣಾಮ ಮೊದಲು ಹೊಗೆ ಕಾಣಿಸಿಕೊಂಡಿದೆ. ಬಳಿಕ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿದೆ.
ಪರಿಸ್ಥಿತಿಯನ್ನು ಗಮನಿಸಿದ ಚಾಲಕ ತಕ್ಷಣ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿದ್ದರೂ, ಕೆಲ ಪ್ರಯಾಣಿಕರ ಮೊಬೈಲ್ ಫೋನ್, ಲಗೇಜ್ ಹಾಗೂ ಇತರೆ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲವು ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
[ad_2]
Source link


















Leave a Reply