Advertisement

ಬಡ ಹಿಂದೂ ಮಹಿಳೆ ಪರ ನೆರವು ಕೇಳಿದ ಮುಸ್ಲಿಂ ಮಹಿಳೆಯರು – ಉಡುಪಿಯಲ್ಲಿ ಅಪರೂಪದ ಘಟನೆ

[ad_1]

Udupi Muslim Women

– ತಕ್ಷಣವೇ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವಂತೆ ಡಿಸಿಗೆ ಸಚಿವೆ ಹೆಬ್ಬಾಳ್ಕರ್‌ ಸೂಚನೆ

ಉಡುಪಿ: 35 ವರ್ಷಗಳ ಹಿಂದೆ ಸರ್ಕಾರದಿಂದ ನಿವೇಶನ ಮಂಜೂರು ಆಗಿದ್ದರೂ ಅರಣ್ಯ ಇಲಾಖೆಯ ಹಸ್ತಕ್ಷೇಪದಿಂದಾಗಿ ಮನೆ ಕಟ್ಟಲಾಗದೇ ದಿಕ್ಕೆಟ್ಟು ಹೋಗಿದ್ದ ಹಿಂದೂ ವಿಧವಾ ಮಹಿಳೆಯೊಬ್ಬರ ಪರವಾಗಿ ನೆರೆಮನೆಯ ಮುಸ್ಲಿಂ ಮಹಿಳೆಯರು ದನಿ ಎತ್ತಿದ ಅಪರೂಪದ ಪ್ರಸಂಗ ಉಡುಪಿಯಲ್ಲಿ ನಡೆದಿದೆ.

ಉಡುಪಿಗೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನ ಭೇಟಿಯಾಗಿ ಮುಸ್ಲಿಂ ಮಹಿಳೆಯರು ನೆರವು ಯಾಚಿಸಿದ್ದು ಹಿಂದೂ – ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದಾರೆ. ಇದನ್ನೂ ಓದಿ: 9, 10ನೇ ತರಗತಿಗೆ ತ್ರಿಭಾಷಾ ಸೂತ್ರ ಕಡ್ಡಾಯಗೊಳಿಸಿದ CBSE – ಜುಲೈ 1ರಿಂದ ಜಾರಿ

ಉಡುಪಿ ತಾಲೂಕಿನ 80 ಬಡಗಬೆಟ್ಟು ನಿವಾಸಿ ಗಿರಿಜಾ ಶೆಟ್ಟಿಗಾರ್ ಎಂಬ ವಯಸ್ಕ ಮಹಿಳೆ ಗಂಡನನ್ನ ಕಳಕೊಂಡಿದ್ದು, ಒಬ್ಬಂಟಿಯಾಗಿ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಆದ್ರೆ ಇವರಿಗೆ 1989 ರಲ್ಲಿ ಭೂರಹಿತರಿಗೆ ವಿತರಿಸಲಾಗುವ ವಸತಿ ನಿವೇಶನ ಯೋಜನೆಯಡಿ 5 ಸೆಂಟ್ಸ್ ಭೂಮಿ ಮಂಜೂರಾಗಿತ್ತು. ಇದರ ಹಕ್ಕುಪತ್ರವನ್ನೂ ಮಹಿಳೆಗೆ ನೀಡಲಾಗಿತ್ತು. ಆದರೆ ಆ ಭೂಮಿ ರಕ್ಷಿತಾರಣ್ಯ ವ್ಯಾಪ್ತಿಗೆ ಸೇರಿದ್ದೆಂದು ಅರಣ್ಯ ಅಧಿಕಾರಿಗಳು ವಾಸ್ತವ್ಯಕ್ಕೆ ಅಡ್ಡಿಪಡಿಸಿದ್ದು ಮಹಿಳೆಯ ಸ್ವಾಧೀನಕ್ಕೆ ಬಿಟ್ಟು ಕೊಡಲು ನಿರಾಕರಿಸಿದ್ದರು.

Udupi Muslim Women 2

ಇದನ್ನು ಪ್ರಶ್ನಿಸಿ ಮಹಿಳೆ ಹೋರಾಡುವ ಸ್ಥಿತಿಯಲ್ಲಿ ಇರಲಿಲ್ಲ. ಬಡ ಮಹಿಳೆಯಾಗಿದ್ದರಿಂದ ಭೂಮಿಯ ವಾಸ್ತವ್ಯ ಸಿಗದೇ ಮನೆಯನ್ನೂ ಕಟ್ಟಲಾಗದೇ ಕೂಲಿ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಿದ್ದರು. ಕಾನೂನು ಪ್ರಕಾರ, ಭೂಮಿಯ ವಾಸ್ತವ್ಯ ಪಡೆಯಲು ನೆರೆಮನೆಯ ಸಲಹುದ್ದೀನ್ ಕುಟುಂಬಸ್ಥರು ಗಿರಿಜಾ ಅವರನ್ನ ಹಲವು ಅಧಿಕಾರಿಗಳ ಬಳಿಗೆ ಕರೆದೊಯ್ದಿದ್ದಾರೆ. ಆದ್ರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ಜಾಗ ಸ್ವಂತದ್ದು ಇದ್ದರೆ ಮನೆ ಕಟ್ಟಿಕೊಡಲು ನೆರವು ಕೊಡುವ ಉದಾರಿಗಳಿದ್ದಾರೆ, ಆದರೆ ಹಕ್ಕುಪತ್ರ ಇದ್ದರೂ ವಾಸ್ತವ್ಯಕ್ಕೆ ಅರಣ್ಯ ಇಲಾಖೆ ಅಡ್ಡಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಮೊರೆ ಹೋಗಿದ್ದಾರೆ.

ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಗೆಸ್ಟ್ ಹೌಸ್ ಬಳಿಗೆ ಇಬ್ಬರು ಮುಸ್ಲಿಂ ಮಹಿಳೆಯರು, ಹಿಂದೂ ಬಡ ಮಹಿಳೆಗೆ ನೆರವು ನೀಡುವಂತೆ ಅಹವಾಲು ಮಂಡಿಸಿದ್ದಾರೆ. ನಮಗೇನೂ ಬೇಡ, ಆ ಮಹಿಳೆಗೆ ಸಹಾಯ ಮಾಡಿ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ:  10 ಲಕ್ಷಕ್ಕೆ NEET ಪ್ರಶ್ನೆಪತ್ರಿಕೆ ಖರೀದಿಸಿದ್ದ ತಂದೆ – ಮಗ ಗಳಿಸಿದ್ದು 720ಕ್ಕೆ 107 ಅಂಕ, ಏಕೆ ಹೀಗಾಯ್ತು?

ಇದನ್ನ ಕೇಳಿದ ಸಚಿವರು, ಇದು ನಮ್ಮ ಭಾರತ. ಬಡ ಹಿಂದೂ ಮಹಿಳೆಯ ಪರವಾಗಿ ಮುಸ್ಲಿಂ ಮಹಿಳೆಯರು ಕಣ್ಣೀರು ಹಾಕುತ್ತಿದ್ದಾರೆ. ಉಡುಪಿಯ ಬಿಜೆಪಿಗರು ಇವರನ್ನು ನೋಡಿ ಕಲಿಯಬೇಕು ಎಂದಿದ್ದಾರೆ. ಮಹಿಳೆಯ ಪರವಾಗಿ ಭೂಮಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚಿಸುತ್ತೇನೆ ಎಂದು ಸಚಿವರು ಭರವಸೆ ನೀಡಿದ್ದಾರೆ.

[ad_2]

Source link publictv.in

Leave a Reply

Your email address will not be published. Required fields are marked *