Advertisement

ಪೊಕ್ಸೋ ಕೇಸ್‌ ಆರೋಪಿಯಾದ ಮಗನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಕೇಂದ್ರ ಸಚಿವ!!

[ad_1]

ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಬಂಡಿ ಭಗೀರಥ್, ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ಕಿರುಕುಳದ ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರ ಮುಂದೆ ಶರಣಾಗಿದ್ದಾರೆ.  ಅವರ ಅಪ್ಪ ಕೇಂದ್ರ ಸಚಿವ ಬಂಡಿ ಸಂಜಯ್ ಅವರೇ ತಮ್ಮ ಮಗನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

17 ವರ್ಷದ ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ತಮ್ಮ ವಕೀಲರ ಮೂಲಕ ಭಗೀರಥ್ ಪೊಲೀಸರಿಗೆ ಶರಣಾಗಿದ್ದಾರೆ.

ಬಳಿಕ ಅವರು ನನ್ನ ಮಗನ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಮತ್ತು ಕಾನೂನನ್ನು ಗೌರವಿಸುತ್ತಾ, ನಾನು ಭಗೀರಥನನ್ನು ವಕೀಲರ ಮೂಲಕ ಪೊಲೀಸರಿಗೆ ಒಪ್ಪಿಸಿದ್ದೇನೆ. ಕಾನೂನಿನ ಮುಂದೆ ಎಲ್ಲರೂ ಸಮಾನರು, ಅದು ನನ್ನ ಮಗನಾಗಿರಲಿ ಅಥವಾ ಸಾಮಾನ್ಯ ನಾಗರಿಕನಾಗಿರಲಿ, ಎಲ್ಲರೂ ಕಾನೂನನ್ನು ಪಾಲಿಸಬೇಕು” ಎಂದು ಕೇಂದ್ರ ಸಚಿವರು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ. ಆತನ ಜಾಮೀನು ಅರ್ಜಿಯನ್ನು ತೆಲಂಗಾಣ ಹೈಕೋರ್ಟ್ (Telangana High Court) ಶನಿವಾರ (ಮೇ 16) ವಜಾ ಮಾಡಿತ್ತು. ಹೀಗಾಗಿ ತಲೆಮರೆಸಿಕೊಂಡಿದ್ದ ಆರೋಪಿ ವಿರುದ್ಧ ಪೊಲೀಸರು ಲುಕೌಟ್ ನೋಟಿಸ್ ಜಾರಿ ಮಾಡಿದ್ದರು. ಇದು ಕೇಂದ್ರ ಸಚಿವರಿಗೆ ಭಾರೀ ಮುಜುಗರ ಉಂಟು ಮಾಡಿತ್ತು. ಅದರ ಬೆನ್ನಲ್ಲೇ ಆರೋಪಿ ಪೊಲೀಸರಿಗೆ ಶರಣಾಗಿದ್ದು, ಆತನನ್ನು ಬಂಧಿಸಲಾಗಿದೆ.

banner

ಏನಿದು ಪ್ರಕರಣ? ಬಾಲಕಿಯ ತಾಯಿಯ ಗಂಭೀರ ದೂರು

ಮೇ 8 ರಂದು 17 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಸೈಬರಾಬಾದ್ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಭಗೀರಥ್ ತಮ್ಮ ಮಗಳೊಂದಿಗೆ ಪ್ರೇಮ ಸಂಬಂಧ ಹೊಂದಿದ್ದು, ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪರಿಚಯಸ್ಥರ ಮೂಲಕ ಜೂನ್ 2025 ರ ಸುಮಾರಿಗೆ ಇವರಿಬ್ಬರ ಮಧ್ಯೆ ಪರಿಚಯವಾಗಿದ್ದು, ನಂತರ ಇನ್‌ಸ್ಟಾಗ್ರಾಮ್ ಮತ್ತು ಸ್ನ್ಯಾಪ್‌ಚಾಟ್ ಮೂಲಕ ಸಂಪರ್ಕ ಮುಂದುವರಿದಿತ್ತು. ಬಾಲಕಿಗೆ 18 ವರ್ಷ ತುಂಬಿದ ನಂತರ ಮದುವೆಯಾಗುವುದಾಗಿ ನಂಬಿಸಿ ಭಗೀರಥ್ ಆಕೆಯ ಮೇಲೆ ಮಾನಸಿಕ ಒತ್ತಡ ಹೇರಿದ್ದ ಎನ್ನಲಾಗಿದೆ. ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡ ನಂತರ ಪೊಲೀಸರು ಮತ್ತಷ್ಟು ಕಠಿಣ ಪೋಕ್ಸೋ ಸೆಕ್ಷನ್‌ಗಳನ್ನು ಪ್ರಕರಣಕ್ಕೆ ಸೇರಿಸಿದ್ದಾರೆ.



[ad_2]

Source link

Leave a Reply

Your email address will not be published. Required fields are marked *