[ad_1]
ಬೆಂಗಳೂರು: ಕರ್ನಾಟಕ ರಾಜ್ಯದ ಕರಾವಳಿ, ಮಲೆನಾಡು ಮತ್ತು ಒಳನಾಡಿನಲ್ಲಿ ಮುಂದಿನ ಒಂದು ವಾರ ಮುಂಗಾರು ಪೂರ್ವ ಭಾರೀ ಮಳೆಯಾಗುವ ನೀರಿಕ್ಷೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.
ಕರಾವಳಿಯ ಜಿಲ್ಲೆಗಳು, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಹ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.ಇದರೊಂದಿಗೆ ಮುಂಗಾರು ಪೂರ್ವ ಮಳೆ ಆಗಮನದಿಂದ ಮುಂಗಾರು ಬಿತ್ತನೆ ಚಟುವಟಿಕೆ ವೇಗ ಪಡೆದುಕೊಳ್ಳುತ್ತಿದೆ. ಉತ್ತರ ಒಳನಾಡು ಕರ್ನಾಟಕದಲ್ಲಿ ಮಾತ್ರ ಬಿಸಿಲಿನ ತಾಪಮಾನ ಮುಂದುವರಿಯಲಿದೆ.
ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯೊಂದಿಗೆ ಕೆಲವೆಡೆ ಆಲಿಕಲ್ಲು ಮಳೆಯ ಸಾಧ್ಯತೆಯೂ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.ಬೆಂಗಳೂರು ನಗರದಲ್ಲಿಯೂ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಧ್ಯಾಹ್ನ ನಂತರ ತುಂತುರು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೇ 22ರಿಂದ ಕೆಲ ಜಿಲ್ಲೆಯಲ್ಲಿ ಒಣಹವೆ ವಾತಾವರಣ ನಿರ್ಮಾಣವಾಗಲಿದೆ ಎಂದು ಇಲಾಖೆ ಹೇಳಿದೆ.
ಮುಂಗಾರು ಪ್ರವೇಶ
ಮೇ 26ರ ಸುಮಾರಿಗೆ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಅಂಡಮಾನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಭಾಗಗಳಲ್ಲಿ ಈಗಾಗಲೇ ಮುಂಗಾರು ಚಟುವಟಿಕೆ ಚುರುಕುಗೊಂಡಿದೆ. ತಮಿಳುನಾಡು ಹಾಗೂ ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ಮೇಲ್ಮಟ್ಟದ ಚಂಡಮಾರುತ ವಲಯ ನಿರ್ಮಾಣವಾಗಿರುವುದು ಕರ್ನಾಟಕದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
[ad_2]
Source link

















Leave a Reply