Advertisement

ಮಾಸ್ಕೋ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ – ಓರ್ವ ಭಾರತೀಯ ಸಾವು, ಮೂವರಿಗೆ ಗಂಭೀರ ಗಾಯ

[ad_1]

One Indian Worker Killed Three Others Injured In Moscow Drone Attack Embassy Confirms

ಮಾಸ್ಕೋ: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ(Moscow) ಮೇಲೆ ಇಂದು(ಮೇ 17) ನಡೆದ ಭೀಕರ ಡ್ರೋನ್ ದಾಳಿಯಲ್ಲಿ ಓರ್ವ ಭಾರತೀಯ (Indian) ಕಾರ್ಮಿಕ ಸಾವನ್ನಪ್ಪಿದ್ದಾರೆ ಮತ್ತು ಮೂವರು ಭಾರತೀಯರು ತೀವ್ರವಾಗಿ ಗಾಯಗೊಂಡಿದ್ದಾರೆ.

ರಷ್ಯಾ ಮತ್ತು ಉಕ್ರೇನ್ (Russia- Ukraine) ನಡುವಿನ ಯುದ್ಧ ತೀವ್ರಗೊಂಡ ಹಿನ್ನೆಲೆಯಲ್ಲಿ, ಉಕ್ರೇನ್ ಸೇನೆಯು ರಷ್ಯಾದ ರಾಜಧಾನಿ ಮಾಸ್ಕೋ ಮತ್ತು ಅದರ ಸುತ್ತಮುತ್ತಲಿನ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಇತ್ತೀಚಿನ ದಿನಗಳಲ್ಲೇ ಅತಿ ದೊಡ್ಡ ಜಂಟಿ ಡ್ರೋನ್ ದಾಳಿಯನ್ನು ನಡೆಸಿದೆ.

ಮಾಸ್ಕೋ ಸಮೀಪದ ಖಿಮ್ಕಿ ಮತ್ತು ಮೈತಿಶ್ಚಿ ವಸತಿ ಪ್ರದೇಶಗಳ ಮೇಲೆ ಡ್ರೋನ್ ಅವಶೇಷಗಳು ಬಿದ್ದಿದ್ದು, ತೈಲ ಸಂಸ್ಕರಣಾಗಾರಕ್ಕೂ ಹಾನಿಯಾಗಿದೆ. ಘಟನೆಯಲ್ಲಿ ಒಟ್ಟು ನಾಲ್ಕು ಜನರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ; ಇದರಲ್ಲಿ ಒಬ್ಬ ಭಾರತೀಯ ಕಾರ್ಮಿಕ ಮೃತಪಟ್ಟಿದ್ದು, ಮೂವರು ಭಾರತೀಯರು ಗಾಯಗೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ 1,000ಕ್ಕೂ ಹೆಚ್ಚು ಉಕ್ರೇನಿಯನ್ ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ರಷ್ಯಾ ಹೇಳಿದೆ. ಇದನ್ನೂ ಓದಿ: ರಷ್ಯಾ ಮೇಲೆ 550ಕ್ಕೂ ಹೆಚ್ಚು ಭೀಕರ ಡ್ರೋನ್‌ ದಾಳಿ- 4 ಮಂದಿ ಸಾವು

ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಘಟನಾ ಸ್ಥಳ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿ, ಗಾಯಗೊಂಡವರಿಗೆ ಅಗತ್ಯ ವೈದ್ಯಕೀಯ ಮತ್ತು ಕಾನೂನು ನೆರವು ನೀಡಲು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.



[ad_2]

Source link publictv.in

Leave a Reply

Your email address will not be published. Required fields are marked *