Advertisement

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಿ – ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವಿಗೆ ಖಂಡ್ರೆ ಸಂತಾಪ

[ad_1]

Eshwar Khandre 4

ಮಡಿಕೇರಿ: ಕೊಡಗು ಜಿಲ್ಲೆ ದುಬಾರೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಅನಿರೀಕ್ಷಿತವಾಗಿ ಆಯತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ.

ಇದು ಅತ್ಯಂತ ಆಘಾತಕರ ಘಟನೆ, ಆನೆಗಳನ್ನು ಸ್ನಾನ ಮಾಡಿಸುವಾಗ ತಮಿಳುನಾಡಿನ ಪ್ರವಾಸಿ ಮಹಿಳೆ ತುಳಸಿ (33) ನದಿಯ ಬಳಿ ನಿಂತು ನೋಡುತ್ತಿದ್ದರು. ಈ ವೇಳೆ ಆನೆಗಳ ನಡುವೆ ಕಾದಾಟ ಶುರುವಾಗಿದ್ದು, ಆಯತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆ ಮೃತಪಟ್ಟಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ದುಬಾರೆಯಲ್ಲಿ ದುರಂತ – ಮಾರ್ತಾಂಡನ ಜೊತೆ ಕಂಜನ್ ಕಾದಾಟಕ್ಕೆ ಪ್ರವಾಸಿ ಮಹಿಳೆ ಬಲಿ

ಸಾಕಾನೆಗಳಾದ ಕಂಜನ್ ಮತ್ತು ಮಾರ್ತಾಂಡ ಸ್ನಾನ ಮಾಡಿಸುತ್ತಿದ್ದ ವೇಳೆ ಪರಸ್ಪರ ಕಾದಾಟ ನಡೆಸಿದ್ದು, ಮಾವುತರು ನಿಯಂತ್ರಿಸುತ್ತಿದ್ದರೂ ಮುನ್ನುಗ್ಗಿದ ಕಂಜನ್ ಆನೆ, ಮಾರ್ತಾಂಡ ಆನೆಗೆ ಗುದ್ದಿದೆ. ಮಾರ್ತಾಂಡ ಆಯತಪ್ಪಿ ಕೆಳಗೆ ಬಿದ್ದಿದ್ದು, ಈ ಮಹಿಳೆ ಆನೆಯ ಕೆಳಗೆ ಸಿಲುಕಿ ಮೃತಪಟ್ಟಿದ್ದಾರೆ. ಇದು ಯಾರೂ ಊಹಿಸದಂತಹ ಘಟನೆಯಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಇಂತಹ ಅಚಾತುರ್ಯಗಳು ಆಗದ ರೀತಿಯಲ್ಲಿ ಕ್ರಮ ವಹಿಸಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಆನೆಗಳು ಸೇರಿದಂತೆ ವನ್ಯಜೀವಿಗಳನ್ನು ಎಷ್ಟೇ ಪಳಗಿಸಿದ್ದರೂ, ಪ್ರಾಣಿಗಳ ಸ್ವಭಾವವನ್ನು ಅರ್ಥ ಮಾಡಿಕೊಳ್ಳುವುದು ಕಷ್ಟಸಾಧ್ಯವಾಗಿದೆ. ಅವು ಯಾವಾಗ ಯಾವ ರೀತಿ ವರ್ತಿಸುತ್ತವೆ ಎಂದು ಊಹಿಸುವುದು ಕಷ್ಟವಾಗುತ್ತದೆ. ಹೀಗಾಗಿ ಆನೆಗಳ ಸೊಂಡಿಲು ಮುಟ್ಟುವುದು, ಪಕ್ಕದಲ್ಲಿ ನಿಂತು ಫೋಟೋ ತೆಗೆಸಿಕೊಳ್ಳುವುದು, ಪ್ರವಾಸಿಗರಿಗೆ ಆನೆ ಮೈ ತೊಳೆಯಲು ಅವಕಾಶ ನೀಡುವುದು, ಅವರಿಂದ ಬೆಲ್ಲ, ಬಾಳೆಹಣ್ಣು ಇತ್ಯಾದಿ ಆಹಾರ ತಿನ್ನಿಸುವುದನ್ನು ನಿರ್ಬಂಧಿಸಲು ಕ್ರಮ ವಹಿಸುವಂತೆ ಮತ್ತು ವನ್ಯಜೀವಿಗಳಿಂದ ಪ್ರವಾಸಿಗರು ನಿರ್ದಿಷ್ಟ ಅಂತರ ಕಾಯ್ದುಕೊಳ್ಳುವಂತೆ ಕ್ರಮ ವಹಿಸುವಂತೆ  ಸೂಚಿಸಿದ್ದಾರೆ.ಇದನ್ನೂ ಓದಿ: ಹೈದರಾಬಾದ್‌ ಆರ್‌ಸಿಬಿ ಮ್ಯಾಚ್‌ ಟಿಕೆಟ್‌ ಬೆಲೆ ಸಿಕ್ಕಾಪಟ್ಟೆ ಏರಿಕೆ – ಕೆಲವೇ ನಿಮಿಷಗಳಲ್ಲಿ ಸೋಲ್ಡ್‌ ಔಟ್‌

[ad_2]

Source link publictv.in

Leave a Reply

Your email address will not be published. Required fields are marked *