Advertisement

ಪ.ಬಂಗಾಳದಲ್ಲಿ ಜೂ.1ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಮಾಸಿಕ 3,000 ರೂ. ನೆರವು

[ad_1]

West Bengal Free Govt bus

ಕೋಲ್ಕತ್ತಾ: ಪಶ್ಚಿಮ ಬಂಗಾಳ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳಿಗೆ ಅನುಮೋದನೆ ನೀಡಿದೆ. ಅನ್ನಪೂರ್ಣ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 3,000 ರೂ. ಆರ್ಥಿಕ ನೆರವು ಮತ್ತು ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಒಪ್ಪಿಗೆ ಸೂಚಿಸಿದೆ.

ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಅಗ್ನಿಮಿತ್ರ ಪಾಲ್, ಜೂ.1ರಿಂದ ಪ್ರತಿ ತಿಂಗಳು ಮಹಿಳೆಯರು 3,000 ರೂ.ಗಳ ಆರ್ಥಿಕ ನೆರವು ಪಡೆಯಲಿದ್ದಾರೆ. ಜೊತೆಗೆ ಅಂದಿನಿಂದಲೇ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ದೊರೆಯಲಿದೆ. CAA (ಪೌರತ್ವ ತಿದ್ದುಪಡಿ ಕಾಯ್ದೆ) ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದವರು ಮತ್ತು ಅರ್ಹ ಫಲಾನುಭವಿಗಳು ಅನ್ನಪೂರ್ಣ ಯೋಜನೆಯಡಿಯಲ್ಲಿ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಹರಿದ್ವಾರದ ಹರ್ ಕಿ ಪೌರಿ ಘಾಟ್‌ ಸ್ಫೋಟಿಸುವ ಬೆದರಿಕೆ – ಆರೋಪಿ ಅರೆಸ್ಟ್‌

ಇದೇ ವೇಳೆ ರಾಜ್ಯ ಸರ್ಕಾರವು ತನ್ನ ನೌಕರರು, ಸಂಬಂಧಿತ ಶಾಸನಬದ್ಧ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಏಳನೇ ರಾಜ್ಯ ವೇತನ ಆಯೋಗದ ರಚನೆಗೆ ಅನುಮೋದನೆ ನೀಡಿದೆ. ಜೂನ್‌ನಿಂದ ಧಾರ್ಮಿಕ ವರ್ಗೀಕರಣದ ಆಧಾರದ ಮೇಲೆ ಗುಂಪುಗಳಿಗೆ ನೀಡಲಾಗುವ ಹಣಕಾಸಿನ ಬೆಂಬಲವನ್ನು ನಿಲ್ಲಿಸಲು ಸರ್ಕಾರ ನಿರ್ಧರಿಸಿದೆ. ಕೋಲ್ಕತ್ತಾ ಹೈಕೋರ್ಟ್ ತೀರ್ಪಿನ ಪ್ರಕಾರ, ಸರ್ಕಾರವು ಅಸ್ತಿತ್ವದಲ್ಲಿರುವ ರಾಜ್ಯ ಒಬಿಸಿ ಪಟ್ಟಿಯನ್ನು ರದ್ದುಗೊಳಿಸಲಾಗಿದ್ದು, ಕೋಟಾ ಅರ್ಹತೆಯನ್ನು ನಿರ್ಧರಿಸಲು ತನಿಖಾ ಸಮಿತಿಯನ್ನು ಸ್ಥಾಪಿಸುತ್ತದೆ ಎಂದು ತಿಳಿಸಿದರು.

ಹೈಕೋರ್ಟ್ ತೀರ್ಪಿನ ಪ್ರಕಾರ, ರಾಜ್ಯ ಸರ್ಕಾರವು ಒಬಿಸಿ ಸಂಬಂಧಿತ ವಿಷಯಗಳಲ್ಲಿ ಕಟ್ಟುನಿಟ್ಟಾಗಿ ಮುಂದುವರಿಯುತ್ತದೆ. ಪಶ್ಚಿಮ ಬಂಗಾಳದಲ್ಲಿ ಸಾರ್ವಜನಿಕರಿಗಾಗಿ ಹೊಸ ಎಲೆಕ್ಟ್ರಿಕ್‌ ಬಸ್‌ಗಳನ್ನು ಪರಿಚಯಿಸಲಾಗುವುದು. ಪ್ರತಿ 15 ದಿನಗಳಿಗೊಮ್ಮೆ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದರು.ಇದನ್ನೂ ಓದಿ: ಮಹಾರಾಷ್ಟ್ರದ 16 ವಿಧಾನ ಪರಿಷತ್‌ ಸ್ಥಾನಗಳಿಗೆ ಜೂ.18ರಂದು ಮತದಾನ



[ad_2]

Source link publictv.in

Leave a Reply

Your email address will not be published. Required fields are marked *