[ad_1]
1
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಎರಡನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಿಸಿದ್ದು, ದೇಶಾದ್ಯಂತ ಪ್ರತಿ ಲೀಟರ್‌ಗೆ ಸುಮಾರು 90 ಪೈಸೆಯಷ್ಟು ಏರಿಕೆಯಾಗಿದೆ.


ಹೌದು, ಇಂದು ಬೆಳ್ಳಂಬೆಳಗ್ಗೆ ಮತ್ತೊಮ್ಮೆ ಪೆಟ್ರೋಲ್, ಡೀಸೆಲ್ (Petrol, Diesel) ದರ ಪ್ರತಿ ಲೀಟರ್‌ಗೆ ಸರಾಸರಿ 90 ಪೈಸೆ ಏರಿಕೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಒಂದೇ ವಾರದಲ್ಲಿ ಎರಡನೇ ಬಾರಿ ತೈಲ ಬೆಲೆ ಏರಿಕೆಯಾಗಿದ್ದು, ಇದರಿಂದ ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಂತಾಗಿದೆ.
ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಪ್ರತಿ ಲೀಟರ್‌ಗೆ 94 ಪೈಸೆ ಏರಿಕೆಯಾಗಿದೆ. ಇದರಿಂದ 4 ದಿನಗಳ ಹಿಂದೆ 106.17 ರೂ.ಇದ್ದ ರೂಪೆಟ್ರೋಲ್ ಬೆಲೆ 107.16 ರೂ. ಹಾಗೂ 94.10 ರೂ. ಇದ್ದ ಡೀಸೆಲ್ 95.03 ರೂ. ಗೆ ತಲುಪಿದೆ.
[ad_2]
Source link

















Leave a Reply