Advertisement

ದುಬಾರೆಯಲ್ಲಿ ಭೀಕರ ಕಾದಾಟದಿಂದ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

[ad_1]

Kanjan Elephant

-ದುಬಾರೆ ಸಾಕಾನೆ ಶಿಬಿರ ತಾತ್ಕಾಲಿಕ ಬಂದ್

ಮಡಿಕೇರಿ: ದುಬಾರೆ ಸಾಕಾನೆ ಶಿಬಿರದಲ್ಲಿ (Dubare Elephant Camp) ಕಂಜನ್ (Kanjan) ಮತ್ತು ಮಾರ್ತಾಂಡ ಆನೆಗಳ (Marthanda Elephant) ನಡುವೆ ಸೋಮವಾರ ನಡೆದ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದೆ.

ಸೋಮವಾರ ಕಂಜನ್ ಆನೆ ಹಾಗೂ ಮಾರ್ತಾಂಡ ಆನೆ ಕಾದಾಟದಲ್ಲಿ ಮಹಿಳೆಯೊಬ್ಬರು ಬಲಿಯಾಗಿದ್ದರು. ಕಾದಾಟದಲ್ಲಿ ಕಂಜನ್ ಆನೆ ಮಾರ್ತಾಂಡ ಆನೆಯ ಹೊಟ್ಟೆ, ಕಿವಿ ಹಾಗೂ ಇತರೆ ಭಾಗಗಳಿಗೆ ತಿವಿದು ಗಾಯ ಗೊಳಿಸಿತ್ತು. ತೀವ್ರ ಗಾಯಗೊಂಡಿದ್ದ ಮಾರ್ತಾಂಡ ಆನೆಗೆ ದುಬಾರೆ ಸಾಕಾನೆ ಶಿಬಿರದಲ್ಲಿ ಡಾ.ಮುಜಿಭ್ ಹಾಗೂ ಚಿಟ್ಟಿಯಪ್ಪ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮಾರ್ತಾಂಡ ಆನೆ ಮೃತಪಟ್ಟಿದೆ. ಇದನ್ನೂ ಓದಿ: ಬೀದಿ ನಾಯಿಗಳ ಸ್ಥಳಾಂತರ ಆದೇಶ ಹಿಂಪಡೆಯಲ್ಲ: ಸುಪ್ರೀಂ ಕೋರ್ಟ್‌

ಆನೆಗಳ ಕಾದಾಟದಲ್ಲಿ ಮಹಿಳೆ ಬಲಿ ಪ್ರಕರಣ ಸಂಬಂಧ ಇಂದು ದುಬಾರೆ ಸಾಕಾನೆ ಶಿಬಿರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಮುಂದಿನ ಆದೇಶದವರೆಗೂ ದುಬಾರೆ ಬಂದ್ ಆಗಲಿದೆ. ಇನ್ನು ಆನೆಗಳ ಕಾದಾಟದಲ್ಲಿ ಮೃತಪಟ್ಟ ಮಹಿಳೆಯ ನೇತ್ರದಾನ ಮಾಡಿ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಸದ್ಯ ಮಹಿಳೆಯ ಮೃತದೇಹವನ್ನು ಚೆನ್ನೈಗೆ ರವಾನಿಸಲಾಗಿದೆ.‌ ಇದನ್ನೂ ಓದಿ: ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆ, ರಾಜ್ಯದಲ್ಲಿ ಉತ್ತಮ ಮಳೆಗಾಗಿ ತಿಮ್ಮಪ್ಪನ ಬಳಿ ಪ್ರಾರ್ಥನೆ: ಡಿಕೆಶಿ


[ad_2]

Source link publictv.in

Leave a Reply

Your email address will not be published. Required fields are marked *