Advertisement

ಗಂಡನ ಕಾಟ ತಡೆಯಲಾರದೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆಯನ್ನು ಗರ್ಭಿಣಿ ಮಾಡಿದ ಪೊಲೀಸಪ್ಪ

[ad_1]

ಪತಿಯ ಕಾಟ ತಾಳಲಾರದೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ವಿವಾಹಿತ ಮಹಿಳೆಯನ್ನು ಪೊಲೀಸ್ ಅಧಿಕಾರಿಯೊಬ್ಬರು ಗರ್ಭಿಣಿ ಮಾಡಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಸಿಐ ಭುಕ್ಯಾ ರಾಜು ನಾಯಕ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಉನ್ನತ ಅಧಿಕಾರಿಗಳು ಸದ್ಯ ಅವರನ್ನು ಹೈದರಾಬಾದ್ನ ಡಿಜಿಪಿ ಕಚೇರಿಗೆ ವರ್ಗಾವಣೆ ಮಾಡಿದ್ದಾರೆ. 

ಸದ್ಯ ಖಮ್ಮಂ ಸಿಸಿಎಸ್ (CCS) ಠಾಣೆಯಲ್ಲಿ ಸಿಐ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಜು ನಾಯಕ್ ವಿರುದ್ಧ ಖಮ್ಮಂ ಟೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2023 ರಲ್ಲಿ ರಾಜು ನಾಯಕ್ ಖಮ್ಮಂ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಿಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ಸಂತ್ರಸ್ತ ಮಹಿಳೆಯು ತನ್ನ ಪತಿ ತನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ನೀಡಲು ಠಾಣೆಗೆ ಬಂದಿದ್ದರು. ದೂರಿನ ಪ್ರತಿಯಲ್ಲಿದ್ದ ಮಹಿಳೆಯ ಫೋನ್ ಸಂಖ್ಯೆಯನ್ನು ಪಡೆದುಕೊಂಡ ಸಿಐ, ಆಕೆಗೆ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿ ನಿರಂತರವಾಗಿ ಕರೆ ಮತ್ತು ಸಂದೇಶಗಳನ್ನು ಕಳುಹಿಸಲು ಪ್ರಾರಂಭಿಸಿದ್ದಾನೆ.

ಮಹಿಳೆಯ ಪರಿಸ್ಥಿತಿಯ ದುರ್ಲಾಭ ಪಡೆದ ಸಿಐ, ಆಕೆಯನ್ನು ಪ್ರೀತಿಸುವುದಾಗಿ ಮತ್ತು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಮಧ್ಯೆ ಮಹಿಳೆ ಗರ್ಭಿಣಿಯಾಗಿದ್ದಾಳೆ. ತಾನು ಗರ್ಭಿಣಿಯಾದ ವಿಷಯ ತಿಳಿದು ತನ್ನನ್ನು ಮದುವೆಯಾಗುವಂತೆ ಮಹಿಳೆ ಒತ್ತಾಯಿಸಿದಾಗ, ಸಿಐ ರಾಜು ನಾಯಕ್ ಆಕೆಗೆ ಬಲವಂತವಾಗಿ ಮಾತ್ರೆಗಳನ್ನು ನುಂಗಿಸಿ ಗರ್ಭಪಾತ ಮಾಡಿಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಪ್ರಾಥಮಿಕ ತನಿಖೆಯಲ್ಲಿ ಸಿಐ ರಾಜು ನಾಯಕ್ ಅವರ ಕಿರುಕುಳ ಮತ್ತು ಅಕ್ರಮ ಸಂಬಂಧ ಸಾಬೀತಾದ ಹಿನ್ನೆಲೆಯಲ್ಲಿ, ಉನ್ನತ ಪೊಲೀಸ್ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡಿದ್ದಾರೆ.

banner



[ad_2]

Source link

Leave a Reply

Your email address will not be published. Required fields are marked *