Advertisement

ಮತ್ತೆ ಮೋದಿ, ಪುಟಿನ್ ಭೇಟಿ – ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಆಗಮನ

[ad_1]

modi putin

ನವದೆಹಲಿ: ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit) ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ ಬ್ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.

ಇದು ಕಳೆದ ಒಂದು ವರ್ಷದೊಳಗೆ ಪುಟಿನ್ ಅವರ ಎರಡನೇ ಭಾರತ ಪ್ರವಾಸವಾಗಿದೆ. 2025ರ ಡಿಸೆಂಬರ್‌ನಲ್ಲಿ ನಡೆದ ಭಾರತ-ರಷ್ಯಾ (India-Russia) ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಜೊತೆ ಪುಟಿನ್ ಮಾತುಕತೆ ನಡೆಸಿದ್ದರು.

ಇದಕ್ಕೂ ಮೊದಲು ರಷ್ಯಾ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಭಾರತಕ್ಕೆ ಭೇಟಿ ನೀಡಿ ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಪ್ರಧಾನಿ ಮೋದಿಯವರ ಜೊತೆಯೂ ಪ್ರತ್ಯೇಕ ಮಾತುಕತೆ ನಡೆಸಿದ್ದರು.

ಈ ಬಾರಿಯ ಬ್ರಿಕ್ಸ್ ಶೃಂಗಸಭೆಯಲ್ಲಿ ಜಾಗತಿಕ ಭದ್ರತೆ, ಆರ್ಥಿಕ ಸಹಕಾರ ಹಾಗೂ ಬಹುಧ್ರುವೀಯ ವಿಶ್ವ ವ್ಯವಸ್ಥೆ ನಿರ್ಮಾಣದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಜಾಗತಿಕ ಮಟ್ಟದಲ್ಲಿ ಬದಲಾಗುತ್ತಿರುವ ರಾಜಕೀಯ ಮತ್ತು ಆರ್ಥಿಕ ಪರಿಸ್ಥಿತಿಗಳ ನಡುವೆ ಈ ಸಭೆ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ದೇಶದ 18 ನಗರಗಳಲ್ಲಿ ವಾಟರ್ ಮೆಟ್ರೋ ಸಾರಿಗೆ – ಕೇಂದ್ರ ಸರ್ಕಾರ ಮಹತ್ವದ ಯೋಜನೆ

modi brics

 ಏನಿದು ಬಹುಧ್ರುವೀಯ ವಿಶ್ವ ವ್ಯವಸ್ಥೆ?
ಬಹುಧ್ರುವೀಯ ವಿಶ್ವ ವ್ಯವಸ್ಥೆ ಎಂದರೆ ಅಂತರರಾಷ್ಟ್ರೀಯ ರಾಜಕೀಯ ಮತ್ತು ಆರ್ಥಿಕತೆಯಲ್ಲಿ ಅಧಿಕಾರವು ಕೇವಲ ಒಂದು ಅಥವಾ ಎರಡು ದೇಶಗಳ (ಉದಾ: ಅಮೆರಿಕ) ಕೈಯಲ್ಲಿ ಇರದೆ, ಅನೇಕ ಪ್ರಮುಖ ದೇಶಗಳ (ಭಾರತ, ಚೀನಾ, ರಷ್ಯಾ) ನಡುವೆ ಹಂಚಿಕೆಯಾಗಿರುವ ವ್ಯವಸ್ಥೆ.

ಬ್ರಿಕ್ಸ್ ಎಂದರೇನು?
ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ದೇಶಗಳ ಒಕ್ಕೂಟವಾಗಿದೆ. ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೂ ಹೆಚ್ಚು ಪ್ರಾಮುಖ್ಯತೆ ಮತ್ತು ಬಲವಾದ ಧ್ವನಿ ಸಿಗಬೇಕು ಎಂಬ ಉದ್ದೇಶದಿಂದ ಈ ಸಂಘಟನೆ ಸ್ಥಾಪಿಸಲಾಯಿತು. ವಿಶ್ವದ ಜನಸಂಖ್ಯೆ ಮತ್ತು ಆರ್ಥಿಕತೆಯಲ್ಲಿ ದೊಡ್ಡ ಪಾಲು ಹೊಂದಿರುವ ಈ ರಾಷ್ಟ್ರಗಳು, ಪಾಶ್ಚಾತ್ಯ ರಾಷ್ಟ್ರಗಳ ಪ್ರಭಾವ ಹೆಚ್ಚಿರುವ ಜಾಗತಿಕ ಹಣಕಾಸು ಸಂಸ್ಥೆಗಳಲ್ಲಿ ಬದಲಾವಣೆ ತರಬೇಕೆಂದು ಒತ್ತಾಯಿಸುತ್ತಿವೆ.

2025ರ ಜುಲೈನಲ್ಲಿ ಬ್ರೆಜಿಲ್‌ನ ರಿಯೋ ಡಿ ಜನೈರೊದಲ್ಲಿ 17ನೇ ಬ್ರಿಕ್ಸ್ ಶೃಂಗಸಭೆ ನಡೆದಿತ್ತು. ಜಾಗತಿಕ ದಕ್ಷಿಣ ರಾಷ್ಟ್ರಗಳ ಸಹಕಾರವನ್ನು ಬಲಪಡಿಸುವ ವಿಷಯದಡಿ ಸಭೆ ಆಯೋಜಿಸಲಾಗಿತ್ತು. ಇದೀಗ 2026ರ ಬ್ರಿಕ್ಸ್ ಶೃಂಗಸಭೆಗೆ ಭಾರತ ಆತಿಥ್ಯ ವಹಿಸುತ್ತಿದ್ದು, ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವ ಹೆಚ್ಚುತ್ತಿರುವುದನ್ನು ಇದು ತೋರಿಸುತ್ತದೆ.

[ad_2]

Source link publictv.in

Leave a Reply

Your email address will not be published. Required fields are marked *