[ad_1]
1
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಿರಿ ಎಂದು ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.


ಬೆಂಗಳೂರಿನಲ್ಲಿ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕರ್ನಾಟಕ ಮುಸ್ಲಿಂ ಸಮಾವೇಶ’ದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮುದಾಯದ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಚುನಾವಣೆಗೂ ಮುನ್ನ ನೀಡಿದ್ದ ಪ್ರಮುಖ ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಲಾಗಿದೆ.
ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷವು ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಹತ್ತು ಭರವಸೆಗಳ ಪೈಕಿ ಒಂದನ್ನು ಮಾತ್ರ ಈಡೇರಿಸಿದೆ. 2 ಬಿ ಮೀಸಲಾತಿ ಮರುಸ್ಥಾಪನೆ ಮಾಡಬೇಕು, ಹಾಗೂ ಮುಸ್ಲಿಮರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವುದು ಸೇರಿದಂತೆ ಹಲವು ಭರವಸೆಗಳನ್ನು ಈಡೇರಿಸಬೇಕು ಎಂದು ಮುಸ್ಲಿಂ ಸಮಾವೇಶ ಒತ್ತಾಯಿಸಿತು. ಅಲ್ಲದೆ ಮುಖ್ಯವಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿ ಸಬೇಕು ಎಂದು ಅಗ್ರಹಿಸಿತು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ಕಾಯ್ದೆಯನ್ನು ವಾಪಸ್ ಪಡೆಯುವ ಅಥವಾ ತಿದ್ದುಪಡಿ ಮಾಡುವ ಭರವಸೆ ನೀಡಿತ್ತು, ಆದರೆ ಇದುವರೆಗೆ ಅದನ್ನು ಮಾಡಿಲ್ಲ .ಆದ್ದರಿಂದ ಈ ಜನವಿರೋಧಿ ಹಾಗೂ ಅಕ್ರಮ ಕಾನೂನನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಸಮಾವೇಶವು ಸರ್ಕಾರವನ್ನು ಒತ್ತಾಯಿಸಿದೆ.
[ad_2]
Source link


















Leave a Reply