Advertisement

ಮಂಗಳೂರು| ಈಜಲು ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವು | Public TV

[ad_1]

ಮಂಗಳೂರು: ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಪಜಿರಡ್ಕದ ಬಳಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಉಜಿರೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇವರು ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದರು.

ಏಳು ಜನ ಸ್ನೇಹಿತರ ತಂಡ ನೇತ್ರಾವತಿ ನದಿಗೆ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಈಜಾಡಲು ತೆರಳಿತ್ತು. ಈ ವೇಳೆ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮೃತದೇಹ ಪತ್ತೆ ಹಚ್ಚಲು ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ಪಡೆ ಶೋಧ ನಡೆಸುತ್ತಿದೆ.

ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

[ad_2]

Source link publictv.in

Leave a Reply

Your email address will not be published. Required fields are marked *