Advertisement

ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ಜಾಮೀನು – ಸನ್ಮಾನ ಮಾಡಲು ಹೋದವರು ಲಾಕ್

[ad_1]

satish reddy murder case Wilson Garden Naga 1

ಬೆಂಗಳೂರು: ನಟೋರಿಯಸ್ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ (Wilson Garden Naga) ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಸನ್ಮಾನ ಮಾಡಲು ಮುಂದಾಗಿದ್ದವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿದ್ದಾಪುರದ ಮಹೇಶ್ ಕೊಲೆ ಪ್ರಕರಣದಲ್ಲಿ ಬೆಳಗಾವಿ ಜೈಲು ಸೇರಿದ್ದ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ನಿನ್ನೆ ಸೆಷನ್ಸ್ ಕೋರ್ಟ್ 48, ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಹುಡುಗರ ಗುಂಪೊಂದು ವಿಲ್ಸನ್ ಗಾರ್ಡನ್ ನಾಗ ರಿಲೀಸ್ ಆಗುವ ವೇಳೆ ಸನ್ಮಾನ ಮಾಡಲು ಮುಂದಾಗಿರುವ ವಿಚಾರ ತಿಳಿದ ಬೆನ್ನಲ್ಲೇ ಸಿಸಿಬಿ, ಒಸಿಡಬ್ಲ್ಯೂ ವಿಂಗ್ ವಶಕ್ಕೆ ಪಡೆದಿದೆ. ಇದನ್ನೂ ಓದಿ: ಭಯೋತ್ಪಾದಕ ಸಂಘಟನೆಗೆ ಯುವಕರ ನೇಮಕ – ಅಪರಾಧಿ ಹಮ್ರಾಜ್ ವರ್ಶಿದ್ ಶೇಖ್‌ಗೆ 7 ವರ್ಷ ಜೈಲು

ಸನ್ಮಾನದ ಸಿದ್ಧತೆ ನಡೆಸಿದ್ದ ಗ್ಯಾಂಗ್ ಮೇಲೆ ದಾಳಿ ನಡೆಸಿದ ಪೊಲೀಸರು ಹೆಡೆಮುರಿ ಕಟ್ಟಿದ್ದು, ವಿಲ್ಸನ್ ಗಾರ್ಡನ್ ನಾಗನ ಮೇಲೂ ಕೂಡ ಕಣ್ಣಿಟ್ಟಿದ್ದಾರೆ.

[ad_2]

Source link publictv.in

Leave a Reply

Your email address will not be published. Required fields are marked *