Advertisement

ಬೆಂಗಳೂರಿನಲ್ಲಿ ಭಾರೀ ಮಳೆ – ಹಳಿಯಲ್ಲೇ ನಿಂತ ಮೆಟ್ರೋ, ಎಲ್ಲಾ ಮಾರ್ಗದಲ್ಲಿ ವಿಳಂಬ

[ad_1]

heavy rain in bengaluru metro services disrupted commuters stranded

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಗಾಳಿ ಮತ್ತು ಗುಡುಗು ಸಹಿತ ಮಳೆಯು ನಮ್ಮ ಮೆಟ್ರೋ ಪ್ರಯಾಣಿಕರ ದೈನಂದಿನ ಸಂಚಾರವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ನಗರದಾದ್ಯಂತ ಸುರಿಯುತ್ತಿರುವ ಜಡಿಮಳೆಯಿಂದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ವ್ಯಾಪ್ತಿಯ ಹಸಿರು ಮತ್ತು ನೇರಳೆ ಸೇರಿದಂತೆ ಎಲ್ಲಾ ಪ್ರಮುಖ ಮೆಟ್ರೋ ಮಾರ್ಗಗಳ ರೈಲು ಸೇವೆಗಳಲ್ಲಿ ಭಾರಿ ವಿಳಂಬ ಉಂಟಾಗಿದೆ.

ಘಟನೆಗೆ ಸಂಬಂಧಿಸಿದಂತೆ ತುರ್ತು ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್‌ ಭಾರೀ ಗಾಳಿ ಹಾಗೂ ಮಳೆಯಿಂದಾಗಿ ಎಲ್ಲಾ ಮೆಟ್ರೋ ಮಾರ್ಗಗಳ ಸೇವೆಯಲ್ಲಿ ವಿಳಂಬ ಉಂಟಾಗಿದೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆಯಾಗಿದೆ. ಈ ಅನಾನುಕೂಲತೆಗೆ ವಿಷಾಧಿಸುತ್ತೇವೆ ಎಂದು ಹೇಳಿದೆ. ಇದನ್ನೂ ಓದಿ: ಬೆಂಗಳೂರಿನ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಆರೆಂಜ್‌ ಅಲರ್ಟ್‌ ಘೋಷಣೆ

ಸುರಕ್ಷಿತವಾಗಿ ರೈಲುಗಳನ್ನು ಕಾರ್ಯಾಚರಣೆ ಮಾಡಬೇಕಿರುವುದರಿಂದ ವೇಳಾಪಟ್ಟಿಯಲ್ಲಿ ಕೊಂಚ ಏರುಪೇರಾಗಿದೆ. ಪರಿಸ್ಥಿತಿ ತಿಳಿಯಾಗುವವರೆಗೆ ಸಾರ್ವಜನಿಕರು ಮತ್ತು ಪ್ರಯಾಣಿಕರು ಸಿಬ್ಬಂದಿಯೊಂದಿಗೆ ಸಹಕರಿಸಬೇಕಾಗಿ ಕೋರಿದೆ.

[ad_2]

Source link publictv.in

Leave a Reply

Your email address will not be published. Required fields are marked *