Advertisement

ಭಾರಿ ಮಳೆ: ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 2 ವಿಮಾನಗಳ ಮಾರ್ಗ ಬದಲು – 14 ವಿಮಾನಗಳ ಹಾರಾಟ ವಿಳಂಬ

[ad_1]

Bengaluru Airport

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಎರಡು ವಿಮಾನಗಳ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದ್ದು, 14 ವಿಮಾನಗಳ ಹಾರಾಟ ವಿಳಂಬವಾಗಿದೆ.

ಗುರುವಾರ (ಮೇ 21) ಸಂಜೆ ಸುರಿದ ಭಾರಿ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಎರಡು ವಿಮಾನಗಳ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದ್ದು, 14 ವಿಮಾನಗಳ ಹಾರಾಟ ತಡವಾಗಿದೆ.ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ಅವಘಡ – ರನ್‌ವೇಗೆ ತಾಗಿದ ಏರ್ ಇಂಡಿಯಾ ವಿಮಾನದ ಹಿಂಭಾಗ

ವಿಮಾನ ನಿಲ್ದಾಣದ ಅಧಿಕಾರಿಗಳ ಮಾಹಿತಿ ಪ್ರಕಾರ, ಕಳಪೆ ಗೋಚರತೆಯಿಂದಾಗಿ ಸಂಜೆ 6:20ಕ್ಕೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನವನ್ನು ಚೆನ್ನೈಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಜೊತೆಗೆ ಬರೇಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಮತ್ತೊಂದು ಇಂಡಿಗೋ ವಿಮಾನವನ್ನು 6:19ಕ್ಕೆ ಕೊಯಮತ್ತೂರಿಗೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಹವಾಮಾನ ವೈಪರೀತ್ಯದಿಂದಾಗಿ ಬರಬೇಕಾಗಿದ್ದ ವಿಮಾನಗಳು ತಡವಾಗಿ ಬಂದ ಹಿನ್ನೆಲೆ, ಬೆಂಗಳೂರಿನಿಂದ ಹೊರಡಬೇಕಾಗಿದ್ದ 14 ವಿಮಾನಗಳ ಸಂಚಾರ ವಿಳಂಬವಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ – ಕೇಂದ್ರ ಸ್ಪಷ್ಟನೆ


[ad_2]

Source link publictv.in

Leave a Reply

Your email address will not be published. Required fields are marked *