Advertisement

ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ – 8 ಜಿಲ್ಲೆಗಳಿಗೆ ಆರೆಂಜ್‌, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

[ad_1]

Maharashtra Rain

– ಬೆಂಗಳೂರಿನಲ್ಲಿ ಇಂದು ಸಹ ಭಾರೀ ಮಳೆ ಎಚ್ಚರಿಕೆ

ಬೆಂಗಳೂರು: ಬಿಸಿಲಿನಿಂದ ಬಾಡಿ ಬಸವಳಿದಿದ್ದ ರಾಜ್ಯದ ಜನಕ್ಕೆ ಪೂರ್ವ ಮುಂಗಾರು ಮಳೆ (Pree Monsoon rain) ತಂಪೆರೆದಿದೆ. ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ (Rain) ಸಾಧ್ಯತೆಯಿದ್ದು, 8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ (Orange Alert) ಹಾಗೂ 19 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಆರೆಂಜ್‌ ಅಲರ್ಟ್‌ ಘೋಷಣೆ

Bengaluru Rains 11

ಬೆಂಗಳೂರಿನಲ್ಲೂ ಇಂದು ಜೋರು ಮಳೆಯಾಗುವ ಮುನ್ಸೂಚನೆ ನೀಡಿದ್ದು, ನಗರಕ್ಕೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೇ ಮುಂದಿನ ಮೂರು ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆ – ಹಳಿಯಲ್ಲೇ ನಿಂತ ಮೆಟ್ರೋ, ಎಲ್ಲಾ ಮಾರ್ಗದಲ್ಲಿ ವಿಳಂಬ

8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಭಾಗದಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

bengaluru rains 1

ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲೂ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಗೃಹಲಕ್ಷ್ಮಿ ಹಣ ಬಾರದ್ದಕ್ಕೆ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರಿನ ಮಹಿಳೆಯರು: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

[ad_2]

Source link publictv.in

Leave a Reply

Your email address will not be published. Required fields are marked *