Advertisement

ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಹಾಕಿ ಮುಸುಕುಧಾರಿಗಳು ಎಸ್ಕೇಪ್

[ad_1]

Injection 2

ಧಾರವಾಡ/ಹುಬ್ಬಳ್ಳಿ: ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಹಾಕಿ ಮುಸುಕುಧಾರಿಗಳು ಎಸ್ಕೇಪ್ ಆಗಿರುವ ಘಟನೆ ಧಾರವಾಡ (Dharwad) ಜಿಲ್ಲೆ ಕುಂದಗೋಳ (Kundagol) ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ನಡೆದಿದೆ.

ಮಣಿಕಂಠ ಗಾಣಿಗೇರ (10) ಎಂಬ ಬಾಲಕನಿಗೆ ಇಂಜೆಕ್ಷನ್ ಹಾಕಿದ್ದಾರೆ. ಇದನ್ನೂ ಓದಿ: ಒಪಿಡಿ ಚೀಟಿ ತರಲು ಹೇಳಿದ್ದಕ್ಕೆ ಬ್ರಿಮ್ಸ್‌ ವೈದ್ಯರ ಮೇಲೆ ಹಲ್ಲೆ – 7 ಜನ ಅರೆಸ್ಟ್

ರಸ್ತೆಯಲ್ಲಿ ಹೋಗುತ್ತಿದ್ದ ಮಣಿಕಂಠನನ್ನು ತಡೆದು ವಿಳಾಸ ಕೇಳುವ ನೆಪದಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಗಟ್ಟಿಯಾಗಿ ಬಾಯಿ ಹಿಡಿದು ಇಂಜೆಕ್ಷನ್ ಚುಚ್ಚಿ ಎಸ್ಕೇಪ್ ಆಗಿದ್ದಾರೆ. ಕೂಡಲೇ ಬಾಲಕನನ್ನು ಪೋಷಕರು ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚುವರಿ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ಗೆ ರವಾನಿಸಿದ್ದಾರೆ.

ಬಾಲಕನಿಗೆ ಯಾವ ಇಂಜೆಕ್ಷನ್ ಹಾಕಿದ್ದಾರೆ ಎಂದು ಪೋಷಕರಲ್ಲಿ ಆತಂಕ ಉಂಟಾಗಿದ್ದು, ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೇ ಮಕ್ಕಳನ್ನು ಹೊರಗೆ ಬಿಡಲು ಪೋಷಕರ ಹಿಂದೇಟು ಹಾಕುತ್ತಿದ್ದಾರೆ. ಸದ್ಯ ಗ್ರಾಮಕ್ಕೆ ಕುಂದಗೋಳ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ:ಕಾಕ್ರೋಚ್ ಜನತಾ ಪಕ್ಷದಿಂದ ಮಾನವ ಸರಪಳಿ ಕರೆ – ಬೆಂಗಳೂರು ಪೊಲೀಸರಿಂದ ಕಾನೂನು ಕ್ರಮದ ಎಚ್ಚರಿಕೆ


[ad_2]

Source link publictv.in

Leave a Reply

Your email address will not be published. Required fields are marked *