Advertisement

ಉಪ್ಪಿನಂಗಡಿ: ಆಳದ ಕಂದಕಕ್ಕೆ ಉರುಳಿದ ಕಾರು

[ad_1]

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಭೀಕರ ಘಟನೆ ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಮೇ 22ರಂದು ಸಂಜೆ ಸಂಭವಿಸಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದರೂ, ಒಳಗಿದ್ದ ಪ್ರಯಾಣಿಕರು ಅದೃಷ್ಟವಶಾತ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತಕ್ಕೀಡಾದ ಕಾರಿನಲ್ಲಿ ಪಟ್ರಮೆ ಗ್ರಾಮದ ದೇರಾಜೆ ನಿವಾಸಿ, ಕೊಕ್ಕಡ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಸಂಚಾಲಕ ಪ್ರಶಾಂತ್ ದೇರಾಜೆ ಹಾಗೂ ಅವರ ಸಹೋದರ ಪ್ರವೀಣ್‌ ದೇರಾಜೆ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.

ಇವರಿಬ್ಬರೂ ಕೊಕ್ಕಡದ ಪಟ್ಟೂರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಪಂಜಳ ಎಂಬಲ್ಲಿ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಕಾರು ರಸ್ತೆ ಬದಿಯಿಂದ ಕೆಳಕ್ಕೆ ಉರುಳಿ, ನದಿ ತೀರದ ಆಳವಾದ ಕಂದಕಕ್ಕೆ ಬಿದ್ದಿದೆ. ಘಟನೆಯ ತೀವ್ರತೆ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಆದರೆ ಕಾರಿನಲ್ಲಿದ್ದ ಇಬ್ಬರು ಸಹೋದರರು ಕೇವಲ ಸಣ್ಣಪುಟ್ಟ ತರಚು ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

banner



[ad_2]

Source link

Leave a Reply

Your email address will not be published. Required fields are marked *