Advertisement

ಆರ್‌ಡಿಪಿಆರ್ ಕಚೇರಿಯಲ್ಲಿ ಗುಂಡು, ತುಂಡು ಪಾರ್ಟಿ: ಎಇಇ ಸೇರಿ ಮೂವರು ಅಮಾನತು

[ad_1]

Linasuguru RDPR Office

ರಾಯಚೂರು: ಜಿಲ್ಲೆಯ ಲಿಂಗಸುಗೂರಿನ (Lingasuguru) ಆರ್‌ಡಿಪಿಆರ್ (RDPR) ಕಚೇರಿಯಲ್ಲಿ ಗುಂಡು ತುಂಡು ಪಾರ್ಟಿ ಮಾಡಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು, ಎಇಇ (AEE) ಸೇರಿ ಮೂವರನ್ನ ಅಮಾನತು ಮಾಡಲಾಗಿದೆ.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಎಇಇ ಕಚೇರಿಯಲ್ಲಿ ಆರ್‌ಡಿಪಿಆರ್ ಎಇಇ ಹನುಮಪ್ಪ ಆದವಾನಿ, ಎಫ್‌ಡಿಎ ರಾಮಣ್ಣ ಪೂಜಾರಿ ಹಾಗೂ ಕಾವಲುಗಾರ ಹನುಮಂತ ಮೂವರು ಗುಂಡು, ತುಂಡು ಪಾರ್ಟಿ ನಡೆಸಿದ್ದರು. ಇದೀಗ ಮೂವರು ಸರ್ಕಾರಿ ಕಚೇರಿಯನ್ನು ವೈಯಕ್ತಿಕ ಉದ್ದೇಶಕ್ಕೆ ಬಳಕೆ ಮಾಡಿಕೊಂಡು ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪದ ಹಿನ್ನೆಲೆ ಆರ್‌ಡಿಪಿಆರ್ ಇಲಾಖೆ ಅಧೀನ ಕಾರ್ಯದರ್ಶಿ ಚೇತನ್ ಎಂ.ಆದೇಶ ಅಮಾನತು ಮಾಡಿ, ಆದೇಶಿಸಿದ್ದಾರೆ. ಇದನ್ನೂ ಓದಿ: AI ವಿಡಿಯೋ ಹಲ್‌ಚಲ್‌, ದುರುಳರಿಗೆ ಎಚ್ಚರಿಕೆ ಕೊಟ್ಟ ʻಕನಕವತಿʼ – ಹಿಂದಿರುವ ಸೂತ್ರಧಾರ ಯಾರು?

ಸರ್ಕಾರಿ ಕಚೇರಿಯಲ್ಲಿ ನಿವೃತ್ತ ನೌಕರರು ಹಾಗೂ ಹೊರಗಿನ ವ್ಯಕ್ತಿಗಳ ಜೊತೆ ಅಧಿಕಾರಿಗಳು ಗುಂಡು, ತುಂಡು ಪಾರ್ಟಿ ಮಾಡಿದ್ದರು. ಈ ಹಿನ್ನೆಲೆ ನೋಟಿಸ್ ಜಾರಿ ಮಾಡಿದ್ದು, ಇಲಾಖೆ ವಿಚಾರಣೆ ಬಾಕಿಯಿರಿಸಿ, ಅಮಾನತು ಮಾಡಿದ್ದಾರೆ.


[ad_2]

Source link publictv.in

Leave a Reply

Your email address will not be published. Required fields are marked *